HomeKarnatakaBREAKING: ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ದುರ್ಮರಣ: ಶ್ರೀಗಂಧದ ಮರ ಕಳ್ಳತನ ಮಾಡಲು ಹೋಗಿ ದುರಂತ...

BREAKING: ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ದುರ್ಮರಣ: ಶ್ರೀಗಂಧದ ಮರ ಕಳ್ಳತನ ಮಾಡಲು ಹೋಗಿ ದುರಂತ ಶಂಕೆ

ಚಿತ್ರದುರ್ಗ: ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ನಡೆದಿದೆ.

ಕೃಷ್ಣಾಪುರ ಗ್ರಾಮದ ಜಯರಾಂ ಎಂಬುವವರ ಅಡಿಕೆ ತೋಟದಲ್ಲಿ ಈ ಘಟನೆ ನಡೆದಿದೆ. ಮಧ್ಯಪ್ರದೇಶ ಮೂಲದ ಮೋಹಿತ್ (24) ಹಾಗೂ ಕತರ್ವ (38) ಮೃತರು.

ಕಳೆದರಾತ್ರಿ ಇಬ್ಬರೂ ಶ್ರೀಗಂಧ ಕಳ್ಳತನಕ್ಕೆ ಬಂದಿರುವ ಶಂಕೆ ವ್ಯಕ್ತವಾಗಿದೆ. ಜಯರಾಂ ಅವರ ಅಡಿಕೆ ತೋಟದಲ್ಲಿ ಕೆಲ ಶ್ರೀಗಂಧ ಮರಗಳು ಇದ್ದವು. ಈ ಹಿನ್ನೆಲೆಯಲ್ಲಿ ಶ್ರೀಗಂಧ ಮರ ಕಳ್ಳತನ ಮಾಡಲು ಹೋಗಿ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರೂ ಸಾವನ್ನಪ್ಪಿರುವ ಅನುಮಾನ ವ್ಯಕ್ತವಾಗಿದೆ. ಅಬ್ಬಿನಹೊಳೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular