HomeBusinessಮತ್ತೆ ವಿದ್ಯುತ್ ದರ ಏರಿಕೆ ಶಾಕ್: ಇಂಧನ ಶುಲ್ಕದ ನೆಪದಲ್ಲಿ ಯೂನಿಟ್ ಗೆ 51 ಪೈಸೆ...

ಮತ್ತೆ ವಿದ್ಯುತ್ ದರ ಏರಿಕೆ ಶಾಕ್: ಇಂಧನ ಶುಲ್ಕದ ನೆಪದಲ್ಲಿ ಯೂನಿಟ್ ಗೆ 51 ಪೈಸೆ ಹೆಚ್ಚಳ

ಬೆಂಗಳೂರು: ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಗೃಹಜ್ಯೋತಿ ಯೋಜನೆಗೆ ಗ್ರೀನ್ ಸಿಗ್ನಲ್ ನೀಡಿದ ಕಾಂಗ್ರೆಸ್ ಸರ್ಕಾರ ಇದರ ಬೆನ್ನಲ್ಲೇ ಗ್ರಾಹಕರಿಗೆ ವಿದ್ಯುತ್ ಬೆಲೆ ಏರಿಕೆಯ ಶಾಕ್ ನೀಡಿದೆ.

ಮೇ 12ರಂದು ಪ್ರತಿ ಯೂನಿಟ್ ವಿದ್ಯುತ್ ಗೆ 70 ಪೈಸೆ ಹೆಚ್ಚಳ ಮಾಡಿದ್ದ ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ ಈಗ ಮತ್ತೆ ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚ ಹೊಂದಾಣಿಕೆ ಶುಲ್ಕದ ನೆಪವೊಡ್ಡಿ ವಿವಿಧ ಎಸ್ಕಾಂಗಳ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ ಸರಾಸರಿ 51 ಪೈಸೆ ಶುಲ್ಕ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜುಲೈ ನಿಂದ ಪರಿಷ್ಕೃತ ಶುಲ್ಕ ಸಂಗ್ರಹಿಸಲಿದ್ದು, ಗೃಹಜೋತಿ ಯೋಜನೆಯ ಫಲಾನುಭವಿಗಳು ಇದರಿಂದ ಪಾರಾಗಿದ್ದಾರೆ.

ಏಪ್ರಿಲ್ 1ರಿಂದ ಅನ್ವಯವಾಗುವಂತೆ ಮೇ 12ರಂದು ಪ್ರತಿ ಯೂನಿಟ್ ಗೆ 70 ಪೈಸೆಯಷ್ಟು ದರ ಹೆಚ್ಚಳ ಮಾಡಲಾಗಿತ್ತು. ಏಪ್ರಿಲ್ ಮತ್ತು ಮೇ ತಿಂಗಳ 2 ಹೆಚ್ಚುವರಿ ಶುಲ್ಕವನ್ನು ಜೂನ್ ನಲ್ಲಿ ವಿಧಿಸಲಾಗುತ್ತದೆ.

ಮಾರ್ಚ್ 13 ರಂದು ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ ನೀಡಿರುವ ಅನುಮೋದನೆಯ ಪ್ರಕಾರ ಏಪ್ರಿಲ್ ನಿಂದ ಜೂನ್ ವರೆಗೆ ಮೂರು ತಿಂಗಳ ಕಾಲ ಬೆಸ್ಕಾಂ ವ್ಯಾಪ್ತಿಯಲ್ಲಿ 1.01 ರೂ., ಮೆಸ್ಕಾಂ ವ್ಯಾಪ್ತಿಯಲ್ಲಿ 93 ಪೈಸೆ, ಸೆಸ್ಕಾಂ ವ್ಯಾಪ್ತಿಯಲ್ಲಿ 82 ಪೈಸೆ, ಹೆಸ್ಕಾಂ ವ್ಯಾಪ್ತಿಯಲ್ಲಿ 1 ರೂಪಾಯಿ, ಜೆಸ್ಕಾಂ ವ್ಯಾಪ್ತಿಯಲ್ಲಿ 67 ಪೈಸೆಯಷ್ಟು ದರ ಹೆಚ್ಚಳ ಮಾಡಬಹುದಾಗಿತ್ತು.  ಈ ಹೊರೆಯನ್ನು ಆರು ತಿಂಗಳಿಗೆ ಹಂಚಿಕೆ ಮಾಡಿದ ಕಾರಣ ಏಪ್ರಿಲ್ 1ರಿಂದ ಜೂನ್ 30ರವರೆಗೆ ಸಂಗ್ರಹಿಸುವ ಬದಲು ಜುಲೈ 1ರಿಂದ ಡಿಸೆಂಬರ್ 31ರವರೆಗೆ ವಸೂಲಿ ಮಾಡಲು ಅವಕಾಶ ನೀಡಲಾಗಿದೆ.

ಮೊದಲ ಹಂತದಲ್ಲಿ ಜುಲೈನಿಂದ ಸೆಪ್ಟಂಬರ್ ವರೆಗೆ ಬೆಸ್ಕಾಂ ಗ್ರಾಹಕರಿಗೆ ಪ್ರತಿ ಯೂನಿಟ್ ಗೆ 51 ಪೈಸೆ, ಮೆಸ್ಕಾಂ ಗ್ರಾಹಕರಿಗೆ 47 ಪೈಸೆ, ಸೆಸ್ಕಾಂ ಗ್ರಾಹಕರಿಗೆ 41 ಪೈಸೆ, ಹೆಸ್ಕಾಂ ಗ್ರಾಹಕರಿಗೆ 50 ಪೈಸೆ, ಜೆಸ್ಕಾಂ ವ್ಯಾಪ್ತಿಯಲ್ಲಿ 34 ಪೈಸೆಯಷ್ಟು ಶುಲ್ಕ ಹೆಚ್ಚಳ ಆಗಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular