BIG NEWS : ರಾಜ್ಯದ ಜನತೆಗೆ ನೆಮ್ಮದಿ ಸುದ್ದಿ : ಶೀಘ್ರದಲ್ಲೇ ‘ವಿದ್ಯುತ್ ದರ’ ಇಳಿಕೆ ಸಾಧ್ಯತೆ

ಬೆಂಗಳೂರು : ವಿದ್ಯುತ್ ದರ ಏರಿಕೆಯಲ್ಲಿರುವ ರಾಜ್ಯದ ಜನತೆಗೆ ನೆಮ್ಮದಿ ಸುದ್ದಿ….ಶೀಘ್ರದಲ್ಲೇ ವಿದ್ಯುತ್ ದರ ಇಳಿಕೆ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಳಗಾವಿಯ ಫೌಂಡರಿ ಕ್ಲಸ್ಟರ್ ಸಭಾಂಗಣದಲ್ಲಿ ಎಂಡಿ ಮೊಹಮ್ಮದ್ ರೋಷನ್ ಕೈಗಾರಿಕೋದ್ಯಮಿಗಳ ಜೊತೆಗೆ ಸಭೆ ನಡೆಸಿದ್ದಾರೆ. ಸಭೆ ವೇಳೆ ಮಾತನಾಡಿದ ಅವರು ಇನ್ನೆರಡು ತಿಂಗಳಲ್ಲಿ ವಿದ್ಯುತ್ ದರ ಕಡಿಮೆಯಾಗುತ್ತದೆ.ದಕ್ಷಿಣ ಭಾರತದ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ವಿದ್ಯುತ್ ದರ ಕಡಿಮೆ ಇದೆ. ಕರ್ನಾಟಕ ರಾಜ್ಯಕ್ಕಿಂತ ಮಹಾರಾಷ್ಟ್ರದಲ್ಲಿ ಹೆಚ್ಚಿನ ವಿದ್ಯುತ್ ದರ ಇದೆ ಎಂದು ಹೇಳಿದ್ದಾರೆ.

ನಾವು ನಷ್ಟ ಮಾಡಿಕೊಂಡು ನಿಮ್ಮನ್ನು ಲಾಭದಲ್ಲಿ ಇಡಬೇಕಾ ಎಂದು ಬೆಳಗಾವಿ ಜಿಲ್ಲಾ ಸಣ್ಣ ಕೈಗಾರಿಕೆ ಸಂಘದ ಅಧ್ಯಕ್ಷ ರೋಹನ್ ಜವಳಿ ಪ್ರಶ್ನಿಸಿದ್ದಾರೆ, ಇದಕ್ಕೆ ಪ್ರತಿಕ್ರಿಯೆ ನೀಡಿದ ಮೊಹಮ್ಮದ್ ರೋಷನ್ ನಾವು ನಿಮ್ಮ ಜೊತೆ ಇರುತ್ತೇವೆ. ಇನ್ನೆರಡು ತಿಂಗಳಲ್ಲಿ ವಿದ್ಯುತ್ ದರ ಕಡಿಮೆಯಾಗುತ್ತದೆ ಎಂದಿದ್ದಾರೆ. ಇನ್ನೂ, ವಿದ್ಯುತ್ ದರ ಏರಿಕೆಗೆ ವಿಪಕ್ಷಗಳು ಹಾಗೂ ಜನರು ಕೂಡ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದು, ಈ ಹಿನ್ನೆಲೆ ಸರ್ಕಾರ ವಿದ್ಯುತ್ ದರ ಇಳಿಕೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ಮಾಹಿತಿ ನೀಡಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read