HomeBusinessರಾಜ್ಯದ ಜನತೆಗೆ ಕರೆಂಟ್ ಶಾಕ್: ವಿದ್ಯುತ್ ಶುಲ್ಕ 60 ಪೈಸೆವರೆಗೆ ಹೆಚ್ಚಳಕ್ಕೆ ಪ್ರಸ್ತಾವನೆ

ರಾಜ್ಯದ ಜನತೆಗೆ ಕರೆಂಟ್ ಶಾಕ್: ವಿದ್ಯುತ್ ಶುಲ್ಕ 60 ಪೈಸೆವರೆಗೆ ಹೆಚ್ಚಳಕ್ಕೆ ಪ್ರಸ್ತಾವನೆ

ಬೆಂಗಳೂರು: ಪ್ರತಿ ಯುನಿಟ್ ಗೆ 50 ರಿಂದ 60 ಪೈಸೆ ವಿದ್ಯುತ್ ಶುಲ್ಕ ಹೆಚ್ಚಳಕ್ಕೆ ಎಸ್ಕಾಂಗಳಿಂದ ವಿದ್ಯುತ್ ಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆಯೋಗ ಒಪ್ಪಿದರೆ ಏಪ್ರಿಲ್ 1ರಿಂದ ದರ ಹೆಚ್ಚಳ ಆಗಲಿದೆ.

ಬೆಸ್ಕಾಂ ಸೇರಿದಂತೆ ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳು ಪ್ರತಿ ಯುನಿಟ್ ಗೆ 50 ರಿಂದ 60 ಪೈಸೆಯಷ್ಟು ವಿದ್ಯುತ್ ದರ ಹೆಚ್ಚಳ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿವೆ. ಡಿಸೆಂಬರ್ ಕೊನೆಯ ವಾರ ಬೆಸ್ಕಾಂನಿಂದ ಯುನಿಟ್ ಗೆ 49 ಪೈಸೆ ಏರಿಕೆ ಮಾಡಲು ಪ್ರಸ್ತಾವನೆ ಸಲ್ಲಿಸಿದ್ದು, ಬೆಸ್ಕಾಂ ಮತ್ತು ಗ್ರಾಹಕರಿಗೆ ಹೊರೆಯಾಗದ ರೀತಿ ದರ ಪರಿಷ್ಕರಣೆ ಮಾಡಲು ಕೆಇಆರ್‌ಸಿ ಮುಂದಾಗಿದೆ. ಈ ನಿಟ್ಟಿನಲ್ಲಿ ಪರಿಶೀಲನೆ ನಡೆಸಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅದೇ ರೀತಿ ಮೆಸ್ಕಾಂ, ಸೆಸ್ಕ್, ಹೆಸ್ಕಾಂ, ಚೆಸ್ಕಾಂ ಕೂಡ ವಿದ್ಯುತ್ ದರ ಪರಿಷ್ಕರಣೆಗೆ ಪ್ರಸ್ತಾವನೆ ಸಲ್ಲಿಸಿದ್ದು, ಪ್ರತಿ ಯುನಿಟ್ ಗೆ 50 ರಿಂದ 60 ಪೈಸೆತಷ್ಟು ದರ ಪರಿಷ್ಕರಣೆಗೆ ಮನವಿ ಮಾಡಿವೆ ಎಂದು ಹೇಳಲಾಗಿದೆ. ಕಲ್ಲಿದ್ದಲು, ವಿದ್ಯುತ್ ಖರೀದಿ, ಸರಬರಾಜು ವೆಚ್ಚ ಮೊದಲಾದ ಕಾರಣಗಳಿಂದ ನಿರ್ವಹಣೆ ಹೊರೆಯಾಗುತ್ತಿದ್ದು, ನಷ್ಟ ಸರಿದೂಗಿಸಲು 2024 -25 ನೇ ಸಾಲಿಗೆ ವಿದ್ಯುತ್ ದರ ಪರಿಷ್ಕರಣೆಗೆ ಮನವಿ ಮಾಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular