ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸೂಚನೆ ಮೇರೆಗೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಬಸಾಪುಟ ಗ್ರಾಮ ದೊಣಮ್ಮ ಅವರ ಮನೆಗೆ ವಿದ್ಯುತ್ ಸಂಪರ್ಕ ನೀಡಲಾಗಿದೆ.
ಬಡತನದ ಕಾರಣಕ್ಕೆ ದೊಣಮ್ಮ ಅವರು ವಿದ್ಯುತ್ ಸಂಪರ್ಕ ಪಡೆದುಕೊಂಡಿರಲಿಲ್ಲ. ಚಳ್ಳಕೆರೆಯ ಮಹೇಂದ್ರ ಎಂಬುವವರು ಈ ಬಗ್ಗೆ ಟ್ರೀಟ್ ಮಾಡಿ ಮುಖ್ಯಮಂತ್ರಿಗಳು ಮತ್ತು ಸಿಎಂ ಕಚೇರಿ ಗಮನ ಸೆಳೆದಿದ್ದರು.
ಮಾಹಿತಿ ದೊರೆತ 24 ಗಂಟೆಯಲ್ಲಿ ದೊಣಮ್ಮ ನಿವಾಸಕ್ಕೆ ವಿದ್ಯುತ್ ಸೌಲಭ್ಯ ಕಲ್ಪಿಸಲಾಗಿದೆ. ಮುಖ್ಯಮಂತ್ರಿಗಳ ಸೂಚನೆಯಂತೆ ಅಧಿಕಾರಿಗಳು ವಿದ್ಯುತ್ ಸೌಲಭ್ಯ ಕಲ್ಪಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಕೊಟ್ಟಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬಸಾಪುರ ಗ್ರಾಮದ ದೊಣಮ್ಮ ಎಂಬ ವೃದ್ಧ ಮಹಿಳೆ ಬಡತನದ ಕಾರಣಕ್ಕೆ ವಿದ್ಯುತ್ ಸಂಪರ್ಕ ಪಡೆಯದೆ ದೀಪದ ಆಸರೆಯಲ್ಲಿ ಬದುಕು ಸಾಗಿಸುತ್ತಿದ್ದ ವಿಚಾರ ಸ್ಥಳೀಯರಾದ ಮಹೇಂದ್ರ ಅವರು ನಮ್ಮ ಕಚೇರಿಯ ಗಮನಕ್ಕೆ ಬಂದ ತಕ್ಷಣ ಸ್ಪಂದಿಸಿ, ಕೇವಲ 24 ಗಂಟೆಗಳ ಒಳಗೆ ಅವರ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಿದ್ದೇವೆ.… https://t.co/ughwvFiHty pic.twitter.com/LduzZkDQPG
— CM of Karnataka (@CMofKarnataka) August 26, 2023

