HomeKarnatakaBIG NEWS: ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲು ಕೊರತೆ: ಹಣ ಕೊಟ್ರೂ ಬೇರೆ ರಾಜ್ಯಗಳಿಂದ ಸಿಗ್ತಿಲ್ಲ...

BIG NEWS: ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲು ಕೊರತೆ: ಹಣ ಕೊಟ್ರೂ ಬೇರೆ ರಾಜ್ಯಗಳಿಂದ ಸಿಗ್ತಿಲ್ಲ ವಿದ್ಯುತ್

ಯಾದಗಿರಿ: ಕರ್ನಾಟಕ ಸೇರಿದಂತೆ ದೇಶದ ಎಲ್ಲಾ ರಾಜ್ಯಗಳಲ್ಲೂ ವಿದ್ಯುತ್ ಸಮಸ್ಯೆ ಇದೆ ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಯಾದಗಿರಿಯಲ್ಲಿ ಮಾತನಾಡಿದ ಅವರು, ವಿದ್ಯುತ್ ಸಮಸ್ಯೆ ವಿಚಾರವನ್ನು ಮುಖ್ಯಮಂತ್ರಿಗಳು ಬಹಳ ಗಂಭೀರವಾಗಿ ಪರಿಗಣಿಸಿದ್ದಾರೆ. ಎಲ್ಲಾ ವಿದ್ಯುತ್ ಕಂಪನಿಗಳೊಂದಿಗೆ ಮುಖ್ಯಮಂತ್ರಿಗಳು ಸಭೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂಧನ ಸಚಿವರು ವಿದ್ಯುತ್ ಖರೀದಿಸಲು ಎಲ್ಲಾ ಕಡೆ ಪ್ರಯತ್ನ ಮಾಡುತ್ತಿದ್ದಾರೆ. ಇರುವುದರಲ್ಲೇ ವೇರಿಯೇಷನ್ ಮಾಡಿ ವಿದ್ಯುತ್ ನೀಡಲು ಪ್ರಯತ್ನಿಸುತ್ತಿದ್ದಾರೆ. ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲು ಸಮಸ್ಯೆ ಕಾಡುತ್ತಿದೆ. ರಾಜ್ಯದಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದೆ. ಹಣ ಕೊಡುತ್ತೇವೆ ಎಂದರೂ ಬೇರೆ ರಾಜ್ಯಗಳಿಂದ ವಿದ್ಯುತ್ ಸಿಗುತ್ತಿಲ್ಲ ಎಂದು ಕೃಷ್ಣ ಬೈರೇಗೌಡ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular