HomeLatest News4 ಲಕ್ಷ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ, ನೀರು ಬಂದ್: 30X40 ನಿವೇಶನದ ಕಟ್ಟಡಕ್ಕೆ ಓಸಿ ವಿನಾಯಿತಿ...

4 ಲಕ್ಷ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ, ನೀರು ಬಂದ್: 30X40 ನಿವೇಶನದ ಕಟ್ಟಡಕ್ಕೆ ಓಸಿ ವಿನಾಯಿತಿ ಬಗ್ಗೆ ಸಂಪುಟದಲ್ಲಿ ಚರ್ಚೆ

ಬೆಂಗಳೂರು: ಸುಪ್ರೀಂಕೋರ್ಟ್ ಆದೇಶದಂತೆ ವಾಸ ಯೋಗ್ಯ ಪ್ರಮಾಣ ಪತ್ರ(ಓಸಿ) ಪಡೆದುಕೊಳ್ಳದ 4 ಲಕ್ಷ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ, ನೀರು ನಿಲ್ಲಿಸಲಾಗಿದೆ. ಇವುಗಳಲ್ಲಿ 30X40 ಅಳತೆಯ ಎರಡು ಮಹಡಿ ಕಟ್ಟಡಗಳಿಗೆ ವಿನಾಯಿತಿ ನೀಡುವ ಕುರಿತಾಗಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಮಂಡಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಸೇರಿ ರಾಜ್ಯದಲ್ಲಿ ಅಕ್ರಮ ಕಟ್ಟಡಗಳ ನಿರ್ಮಾಣ ಹೆಚ್ಚಾಗಿದೆ. ನಗರದಲ್ಲಿ ಶೇಕಡ 70ರಷ್ಟು ಕಟ್ಟಡ ನಿರ್ಮಾಣ ಅಕ್ರಮವಾಗಿದೆ. ಸಾಮರ್ಥ್ಯಕ್ಕಿಂತ ಹೆಚ್ಚು ಮಹಡಿ ನಿರ್ಮಾಣ ಮಾಡುತ್ತಿದ್ದಾರೆ. ಇದಕ್ಕಾಗಿಯೇ ಸುಪ್ರೀಂಕೋರ್ಟ್ ಆದೇಶ ಮಾಡಿದ್ದು, ನಕ್ಷೆ ಮಂಜೂರಾತಿ ಪ್ರಕಾರ ಕಟ್ಟಡ ನಿರ್ಮಿಸಿ ವಾಸ ಯೋಗ್ಯ ಪ್ರಮಾಣ ಪತ್ರ ಪಡೆಯಬೇಕು. ಓಸಿ ಇಲ್ಲದ ಕಟ್ಟಡಗಳಿಗೆ ನೀರು, ವಿದ್ಯುತ್ ಸಂಪರ್ಕ ನೀಡಬಾರದು ಎಂದು ಸೂಚನೆ ನೀಡಿದೆ. ಹೀಗಾಗಿ ರಾಜ್ಯದಲ್ಲಿ 4 ಲಕ್ಷ ಸಂಪರ್ಕಗಳನ್ನು ನಿಲ್ಲಿಸಲಾಗಿದೆ  ಎಂದು ಹೇಳಿದ್ದಾರೆ.

30X40 ಅಳತೆಯ ಎರಡು ಮಹಡಿ ಕಟ್ಟಡಗಳಿಗೆ ವಿನಾಯಿತಿ ನೀಡಬೇಕೆಂಬ ಒತ್ತಾಯ ಕೇಳಿ ಬಂದಿದ್ದು, ಮುಂದಿನ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular