ವಿದ್ಯುತ್ ಗ್ರಾಹಕರೇ ಗಮನಿಸಿ: ರಾಜ್ಯದಲ್ಲಿ ಎರಡು ದಿನ ಎಸ್ಕಾಂಗಳ ‘ಆನ್ಲೈನ್ ಸೇವೆ’ ಇಲ್ಲ

ಬೆಂಗಳೂರು: ರಾಜ್ಯದ 5 ಎಸ್ಕಾಂಗಳ ವ್ಯಾಪ್ತಿಯಲ್ಲಿ ಮಾಹಿತಿ ತಂತ್ರಜ್ಞಾನ ವ್ಯವಸ್ಥೆ ತುರ್ತು ನಿರ್ವಹಣೆ ಹಿನ್ನೆಲೆಯಲ್ಲಿ ಎರಡು ದಿನ ಆನ್ಲೈನ್ ಸೇವೆಯಲ್ಲಿ ವ್ಯತ್ಯಯವಾಗಲಿದೆ.

ಅಕ್ಟೋಬರ್ 24ರ ರಾತ್ರಿ 8 ಗಂಟೆಯಿಂದ ಅಕ್ಟೋಬರ್ 25ರ ಮಧ್ಯಾಹ್ನ 1 ಗಂಟೆಯವರೆಗೆ ರಾಜ್ಯದ 5 ಎಸ್ಕಾಂಗಳ ಆನ್ಲೈನ್ ಸೇವೆಗಳು ನಗರ ಪ್ರದೇಶದಲ್ಲಿ ಲಭ್ಯ ಇರುವುದಿಲ್ಲ.

ಬೆಸ್ಕಾಂ, ಮೆಸ್ಕಾಂ, ಹೆಸ್ಕಾಂ, ಜೆಸ್ಕಾಂ, ಸೆಸ್ಕ್ ವ್ಯಾಪ್ತಿಯಲ್ಲಿ ವಿದ್ಯುತ್ ಬಿಲ್ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ, ಹೊಸ ಸಂಪರ್ಕ ಸೇರಿ ಆನ್ ಲೈನ್ ಆಧಾರಿತ ಸೇವೆ ಲಭ್ಯ ಇರುವುದಿಲ್ಲ.

ವಿದ್ಯುತ್ ಬಿಲ್ ಪಾವತಿಗೆ ಬಳಕೆ ಮಾಡುವ ಬೆಸ್ಕಾಂ ಮಿತ್ರಾ ಆ್ಯಪ್, ಬೆಂಗಳೂರು ಒನ್, ಕರ್ನಾಟಕ ಒನ್ ಸೇರಿದಂತೆ ಇತರೆ ಥರ್ಡ್ ಪಾರ್ಟಿ ಪಾವತಿ ಸೇವೆ ಕೂಡ ಇರುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ.

ಹೆಸ್ಕಾಂ ವ್ಯಾಪ್ತಿಯ ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಾರವಾರ, ನಿಪ್ಪಾಣಿ, ಜಮಖಂಡಿ, ಬೈಲಹೊಂಗಲ, ಲಕ್ಷ್ಮೀಶ್ವರ, ನರಗುಂದ, ರಾಮದುರ್ಗ, ಚಿಕ್ಕೋಡಿ, ಗುಳೇದಗುಡ್ಡ, ಮಹಾಲಿಂಗಪುರ, ಅಥಣಿ, ಭಟ್ಕಳ, ದಾಂಡೇಲಿ, ಇಂಡಿ, ಸವದತ್ತಿ, ಶಿರಸಿ, ಕುಮಟಾ, ಬಾಗಲಕೋಟೆ, ರಬಕವಿ-ಬನಹಟ್ಟಿ, ಗದಗ, ಗೋಕಾಕ, ಹಾವೇರಿ, ಇಳಕಲ್, ಮುಧೋಳ, ರಾಣೆಬೆನ್ನೂರು, ವಿಜಯಪುರ ನಗರ ಉಪ ವಿಭಾಗದಲ್ಲೂ ವ್ಯತ್ಯಯವಾಗಲಿದೆ.

ಬೆಸ್ಕಾಂ ವ್ಯಾಪ್ತಿಯ ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಶಿರಾ, ಚನ್ನಪಟ್ಟಣ, ಆನೇಕಲ್, ಮುಳಬಾಗಿಲು, ಬಂಗಾರಪೇಟೆ, ಗೌರಿಬಿದನೂರು, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್, ಚಳ್ಳಕೆರೆ, ಕುಣಿಗಲ್, ಹರಿಹರ, ಹಿರಿಯೂರು ಮತ್ತು ತಿಪಟೂರು.

ಸೆಸ್ಕ್ ವ್ಯಾಪ್ತಿಯ ಮಳವಳ್ಳಿ, ನಂಜನಗೂಡು, ಮೈಸೂರು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ ಆರ್ ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳೆಗಾಲ, ಹಾಸನ, ಚನ್ನರಾಯಪಟ್ಟಣ.

ಮೆಸ್ಕಾಂ ವ್ಯಾಪ್ತಿಯ ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರು

ಜೆಸ್ಕಾಂ ವ್ಯಾಪ್ತಿಯ ಮಾನ್ವಿ, ಸಿಂಧನೂರು, ಬೀದರ್, ಗಂಗಾವತಿ, ಕಲಬುರಗಿ, ಸೇಡಂ, ಬಸವಕಲ್ಯಾಣ, ವಾಡಿ, ಭಾಲ್ಕಿ ಶಹಾಬಾದ್, ಶಹಾಪುರ, ಸುರಪುರ, ಸಿರಗುಪ್ಪ, ಕಂಪ್ಲಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹುಮ್ನಾಬಾದ್, ವಿಜಯನಗರದಲ್ಲಿ ಆನ್ ಲೈನ್ ಸೇವೆ ಇರುವುದಿಲ್ಲ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read