HomeAgricultureರೈತರಿಗೆ ಹಗಲು 12 ಗಂಟೆ ನಿರಂತರ ವಿದ್ಯುತ್, ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಜಾರಿಗೆ ಸಿಎಂಗೆ...

ರೈತರಿಗೆ ಹಗಲು 12 ಗಂಟೆ ನಿರಂತರ ವಿದ್ಯುತ್, ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಜಾರಿಗೆ ಸಿಎಂಗೆ ಮನವಿ

ಬೆಂಗಳೂರು: ಕೃಷಿ ಪಂಪ್ ಸೆಟ್ ಗಳಿಗೆ ಹಗಲು ನಿರಂತರ 12 ಗಂಟೆ ವಿದ್ಯುತ್ ಪೂರೈಕೆ, ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಯೋಜನೆ ಜಾರಿಗೊಳಿಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಸಲು ರೈತ ಮುಖಂಡರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ.

ಕುರುಬೂರು ಶಾಂತಕುಮಾರ್ ನೇತೃತ್ವದ ರೈತ ಮುಖಂಡರ ನಿಯೋಗ ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ರಾತ್ರಿ ವೇಳೆ ಬೆಳೆಗೆ ನೀರು ಹಾಯಿಸಲು ಹೋಗಿ ರೈತರು ಪ್ರಾಣಿಗಳ ದಾಳಿಯಿಂದ ಜೀವ ಕಳೆದುಕೊಳ್ಳುತ್ತಿದ್ದು, ಹಗಲಿನ ವೇಳೆ 12 ಗಂಟೆ ನಿರಂತರ ವಿದ್ಯುತ್ ಪೂರೈಸಬೇಕು ಎಂದು ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಾ. ಸ್ವಾಮಿನಾಥನ್ ವರದಿಯಂತೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಿ ಬೆಲೆ ಕುಸಿತವಾದಾಗ ಸರ್ಕಾರವೇ ಖರೀದಿಸಬೇಕು ಎಂದು ಕೋರಿದ್ದಾರೆ. ಸರ್ಕಾರದ ಅಂಗಸಂಸ್ಥೆಗಳು, ಆಸ್ಪತ್ರೆ, ಹಾಸ್ಟೆಲ್, ಕಾರಾಗೃಹ, ಅಂಗನವಾಡಿಗಳಿಗೆ ರೈತ ಉತ್ಪಾದಕ ಸಂಸ್ಥೆಗಳ ಮೂಲಕವೇ ಖರೀದಿ ಮಾಡಲು ನಿಯಮ ಜಾರಿಗೆ ತರಲು ಕೋರಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular