HomeAgricultureರೈತರಿಗೆ 7 ಗಂಟೆ ವಿದ್ಯುತ್ ಗೆ ಆಗ್ರಹಿಸಿ ಹೆಸ್ಕಾಂ ಕಚೇರಿಗಳಿಗೆ ಬೀಗ ಜಡಿದು ಪ್ರತಿಭಟನೆ: ಬಿಜೆಪಿ...

ರೈತರಿಗೆ 7 ಗಂಟೆ ವಿದ್ಯುತ್ ಗೆ ಆಗ್ರಹಿಸಿ ಹೆಸ್ಕಾಂ ಕಚೇರಿಗಳಿಗೆ ಬೀಗ ಜಡಿದು ಪ್ರತಿಭಟನೆ: ಬಿಜೆಪಿ ಎಚ್ಚರಿಕೆ

ಚಿಕ್ಕಬಳ್ಳಾಪುರ: ರಾಜ್ಯದ ರೈತರಿಗೆ ನಿರಂತರವಾಗಿ 7 ಗಂಟೆ ತ್ರೀ ಫೇಸ್ ವಿದ್ಯುತ್ ಪೂರೈಕೆ ಮಾಡಬೇಕು. ವಿದ್ಯುತ್ ನೀಡುವಲ್ಲಿ ಸರ್ಕಾರ ವಿಫಲವಾದರೆ ವಿದ್ಯುತ್ ಸರಬರಾಜು ಕಂಪನಿಗಳ ಕಚೇರಿಗಳಿಗೆ ಜಡಿದು ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಮಾಜಿ ಸಿಎಂ ಬಸಬರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ರೈತ ವಿರೋಧಿ ಧೋರಣೆ ಖಂಡಿಸಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ರೈತರಿಗೆ ಸಮರ್ಪಕವಾಗಿ 7 ತಾಸು ವಿದ್ಯುತ್ ನೀಡುವುದು ಸರ್ಕಾರದ ಕರ್ತವ್ಯವಾಗಿದೆ. ಆದರೆ, ಸರ್ಕಾರ ವಿದ್ಯುತ್ ಪೂರೈಸಲು ಯಾವುದೇ ಪ್ರಯತ್ನ ಮಾಡುತ್ತಿಲ್ಲ. ಹಿಂದಿನ ಬಿಜೆಪಿ ಸರ್ಕಾರ ಇಂಧನ ಇಲಾಖೆಗೆ 10,000 ಕೋಟಿ ರೂ. ಅನುದಾನ ನೀಡಿತ್ತು. ಈಗಿನ ಕಾಂಗ್ರೆಸ್ ಸರ್ಕಾರದಲ್ಲಿ ಹಣವೇ ಇಲ್ಲವಾಗಿದೆ. ಕಲ್ಲಿದ್ದಲು ಖರೀದಿಸಲು ಅನುದಾನ ಬಿಡುಗಡೆ ಮಾಡಿಲ್ಲ ಎಂದು ದೂರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೈತರ ಪಂಪ್ ಸೆಟ್ ಗಳಿಗೆ ಕನಿಷ್ಠ ಎರಡು ಗಂಟೆ ವಿದ್ಯುತ್ ಕೂಡ ನೀಡುತ್ತಿಲ್ಲ. ಮೂರು ತಿಂಗಳಲ್ಲಿ ಎರಡು ಸಲ ವಿದ್ಯುತ್ತರ ಏರಿಕೆ ಮಾಡಲಾಗಿದೆ. 1.50 ಲಕ್ಷ ನೀರಾವರಿ ಪಂಪ್ಸೆಟ್ ಗಳು ಇದ್ದು, ಸಮರ್ಪಕ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ. ಈ ನಿಟ್ಟಿನಲ್ಲಿ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular