HomeKarnatakaBREAKING NEWS: ರಾಜ್ಯದ ಜನತೆಗೆ ಗುಡ್ ನ್ಯೂಸ್: ವಿದ್ಯುತ್ ದರ ಇಳಿಸಿ ರಾಜ್ಯ ಸರ್ಕಾರ ಆದೇಶ

BREAKING NEWS: ರಾಜ್ಯದ ಜನತೆಗೆ ಗುಡ್ ನ್ಯೂಸ್: ವಿದ್ಯುತ್ ದರ ಇಳಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ವಿದ್ಯುತ್ ದರ ಇಳಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸರಾಸರಿ 100 ಯೂನಿಟ್ ಬಳಸುವವರಿಗೆ ಅನುಕೂಲವಾಗಲಿದೆ. ಪ್ರತಿ ಯೂನಿಟ್ ವಿದ್ಯುತ್ ದರ 1 ರೂ. 10 ಪೈಸೆ ದರ ಇಳಿಸಲಾಗಿದೆ. ವಾಣಿಜ್ಯ ಬಳಕೆ ವಿದ್ಯುತ್ ದರದಲ್ಲಿಯೂ ಇಳಿಕೆ ಮಾಡಲಾಗಿದೆ. ವಾಣಿಜ್ಯ ಬಳಕೆ ವಿದ್ಯುತ್ ದರ ಯೂನಿಟ್ ಗೆ 1 ರೂ.25 ಪೈಸೆ ಕಡಿಮೆ ಮಾಡಲಾಗಿದೆ.

ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳಿಗೆ ಯೂನಿಟ್ ಗೆ 40 ಪೈಸೆ, ಖಾಸಗಿ ಏತನೀರಾವರಿ ಬಳಕೆ ದರ ಯೂನಿಟ್ ಗೆ 2 ರೂಪಾಯಿ, ಕೈಗಾರಿಕೆಗಳ ವಿದ್ಯುತ್ ದರದಲ್ಲಿ 50 ಪೈಸೆ ಹಾಗೂ ಅಪಾರ್ಟ್ ಮೆಂಟ್ ಗಳ ವಿದ್ಯುತ್ ದರದಲ್ಲಿ 10 ಪೈಸೆ ಇಳಿಕೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾರ್ಚ್ 1ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. 5 ಎಸ್ಕಾಂ ಗಳು ವಿದ್ಯುತ್ ದರ ಪರಿಷ್ಕರಣೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದವು.

For Latest News Updates, Join Our Whatsapp Community🚩
RELATED ARTICLES

Most Popular