ರಾಜ್ಯದ ಗ್ರಾಮೀಣ ಜನತೆಗೆ `ಕರೆಂಟ್ ಶಾಕ್’ : ಸದ್ದಿಲ್ಲದೇ `ಲೋಡ್ ಶೆಡ್ಡಿಂಗ್’ ಜಾರಿ!

ಬೆಂಗಳೂರು : ರಾಜ್ಯದ ಗ್ರಾಮೀಣ ಭಾಗದಲ್ಲಿ ಸದ್ದಿಲ್ಲದೇ ಲೋಡ್ ಶೆಡ್ಡಿಂಗ್ ಜಾರಿಯಾಗಿದ್ದು, ಬೇಸಿಗೆಗೂ ಮುನ್ನವೇ ವಿದ್ಯುತ್ ಬರ ಎದುರಾಗಿದೆ.

ರಾಜ್ಯದಲ್ಲಿ ಈ ಬಾರಿ ಮಳೆ ಕೈಕೊಟ್ಟಿರುವುದರಿಂದ ನಿರೀಕ್ಷೆಯಂತೆ ವಿದ್ಯುತ್ ಉತ್ಪಾದನೆ ಆಗುತ್ತಿಲ್ಲ. ಹೀಗಾಗಿ ರಾಜ್ಯದ ಗ್ರಾಮೀಣ ಭಾಗದಲ್ಲಿ ಅಘೋಷಿತ ಲೋಡ್ ಶೆಡ್ಡಿಂಗ್ ಶುರುವಾಗಿದ್ದು, ರೈತರಿಗೆ ಬಿಗ್ ಶಾಕ್ ಎದುರಾಗಿದೆ.

ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಗಣನೀಯವಾಗಿ ಹೆಚ್ಚಾಗಿದೆ. ಕಳೆದ ಬಾರಿಗೆ ಹೋಲಿಸಿದ್ರೆ ಈ ಬಾರಿ ವಿದ್ಯುತ್ ಬಳಕೆ ಪ್ರಮಾಣ ಶೇ. 20 ರಷ್ಟು ಹೆಚ್ಚಾಗಿದೆ. ಆದರೆ ಬೇಡಿಕೆಗೆ ತಕ್ಕಂತೆ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ಹೀಗಾಗಿ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಅನಿಯಮಿತ ಲೋಡ್ ಶೆಡ್ಡಿಂಗ್ ಜಾರಿಯಾಗಿದೆ.

ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಈಗಾಗಲೇ ರೈತರ ಬೆಳೆಗಳು ಸಂಪೂರ್ಣವಾಗಿ ನೆಲಕಚ್ಚಿದೆ. ಈ ನಡುವೆ ತೋಟಗಾರಿಕೆ ಬೆಳೆಗಳು ಉಳಿಸಿಕೊಳ್ಳಲು ವಿದ್ಯುತ್ ಸಮಸ್ಯೆ ಸಮಸ್ಯೆ ಎದುರಾಗಿದ್ದು, ರೈತರು ಕಂಗಾಲಾಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read