HomeLive NewsBREAKING: ಕ್ರಿಕೆಟ್ ಆಡುವಾಗ ವಿದ್ಯುತ್ ಅವಘಡ: 6ನೇ ತರಗತಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

BREAKING: ಕ್ರಿಕೆಟ್ ಆಡುವಾಗ ವಿದ್ಯುತ್ ಅವಘಡ: 6ನೇ ತರಗತಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮೈಸೂರು: ಕ್ರಿಕೆಟ್ ಆಡುವಾಗ ವಿದ್ಯುತ್ ಪ್ರವಹಿಸಿ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ಬೆಟ್ಟದಪುರದಲ್ಲಿ ನಡೆದಿದೆ. ಶಾಲೆಗೆ ಬೇಸಿಗೆ ರಜೆ ಇರುವ ಹಿನ್ನೆಲ್ಲೆಯಲ್ಲಿ ಸ್ನೇಹಿತರೊಂದಿಗೆ ಆಟವಾಡಲು ಹೋದ ಬಾಲಕ ದುರಂತ ಅಂತ್ಯ ಕಂಡಿದ್ದಾನೆ.

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನಬೆಟ್ಟದಪುರ ಗ್ರಾಮದಲ್ಲಿನ್ ಬಾಲಕ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ. ಈ ವೇಳೆ ವಿದ್ಯುತ್ ತಂತಿ ಮೇಲೆ ಬಾಲ್ ಬಿದ್ದಿದೆ. ಬಾಲ್ ತೆಗೆದುಕೊಳ್ಳಲು ಹೋದಾಗ ವಿದ್ಯುತ್ ಪ್ರವಹಿಸಿ ಬಾಲಕ ಕೊನೆಯುಸಿರೆಳೆದಿದ್ದಾನೆ.

6 ನೇ ತರಗತಿಯ ವಿದ್ಯಾರ್ಥಿ ಧನಂಜಯ್ (12) ಮೃತ ಬಾಲಕ. ಬೆಟ್ಟದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಗನನ್ನು ಕಳೆದುಕೊಂಡಿರುವ ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular