ಕರೆಂಟ್ ಫ್ರೀ, ಬಿಲ್ ಕಟ್ಟಲ್ಲವೆಂದ ಜನ: ಉಚಿತ ವಿದ್ಯುತ್ ಕೊಡುತ್ತೇವೆಂದ ಸಿದ್ದು, ಡಿಕೆಶಿ ಬಳಿ ಬಿಲ್ ಕಟ್ಟಿಸಿಕೊಳ್ಳಿ ಎಂದು ವಾಗ್ವಾದ

ಬೆಂಗಳೂರು: 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡಿದ್ದು, ಈಗ ಅಧಿಕಾರಕ್ಕೆ ಬಂದಿದೆ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರ ಬಳಿ ಕರೆಂಟ್ ಬಿಲ್ ಕಟ್ಟಿಸಿಕೊಳ್ಳಿ ಎಂದು ಜನ ಹೇಳತೊಡಗಿದ್ದಾರೆ.

ವಿದ್ಯುತ್ ಈಗ ಉಚಿತವಾಗಿದ್ದು, ಕರೆಂಟ್ ಬಿಲ್ ಕಟ್ಟುವುದಿಲ್ಲವೆಂದು ಚಿತ್ರದುರ್ಗ ತಾಲೂಕಿನ ಜಾಲಿಕಟ್ಟೆ ಗ್ರಾಮದಲ್ಲಿ ಜನ ಹೇಳಿದ್ದಾರೆ. ವಿದ್ಯುತ್ ಬಿಲ್ ನೀಡಲು ಗ್ರಾಮಕ್ಕೆ ಬಂದಿದ್ದ ಮೀಟರ್ ರೀಡರ್ ಗೆ ಗ್ರಾಮಸ್ಥರು ಆವಾಜ್ ಹಾಕಿ ವಾಪಸ್ ಕಳುಹಿಸಿದ್ದಾರೆ.

200 ಯೂನಿಟ್ ಉಚಿತ ವಿದ್ಯುತ್ ನೀಡುವ ಭರವಸೆಯೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಇದರಿಂದಾಗಿ ಗ್ರಾಮೀಣ ಜನ ವಿದ್ಯುತ್ ಬಿಲ್ ಕಟ್ಟಲು ಹಿಂದೇಟು ಹಾಕುತ್ತಿದ್ದಾರೆ. ವಿದ್ಯುತ್ ಬಿಲ್ ನೀಡಲು ಮತ್ತು ವಸೂಲಿಗೆ ಸೋಲಿಗೆ ಹೋದ ಸಿಬ್ಬಂದಿಯನ್ನು ವಾಪಸ್ ಕಳುಹಿಸಿದ್ದಾರೆ.

ಸರ್ಕಾರದಿಂದ ಆದೇಶ ಬರುವವರೆಗೆ ಏಪ್ರಿಲ್ ತಿಂಗಳಲ್ಲಿ ಬಳಸಿದ್ದ ವಿದ್ಯುತ್ ಬಿಲ್ ಪಾವತಿಸಿ ಎಂದು ಸಿಬ್ಬಂದಿ ಹೇಳಿದರೂ ಜನ ಕೇಳುತ್ತಿಲ್ಲ. ನಾವು ವಿದ್ಯುತ್ ಬಿಲ್ ಕಟ್ಟುವುದಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಅವರ ಬಳಿಯೇ ಬಿಲ್ ಕಟ್ಟಿಸಿಕೊಳ್ಳಿ ಎಂದು ಹೇಳುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read