BIG NEWS: ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ-ಮಗು ಬಲಿ ಪ್ರಕರಣ; ಬಂಧಿತ ಐವರು ಅಧಿಕಾರಿಗಳು ಬಿಡುಗಡೆ

ಬೆಂಗಳೂರು: ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ ಹಾಗೂ 9 ತಿಂಗಳ ಮಗು ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಬೆಸ್ಕಾಂ ಅಧಿಕಾರಿಗಳನ್ನು ಬಿಡುಗಡೆ ಮಾಡಲಾಗಿದೆ.

ವೈಟ್ ಫೀಲ್ಡ್ ನ ಕಾಡುಗೋಡಿಯಲ್ಲಿ ನಿನ್ನೆ ವಿದ್ಯುತ್ ತಂತಿ ತುಳಿದು ತಾಯಿ ಹಾಗೂ 9 ತಿಂಗಳ ಮಗು ಸಜೀವ ದಹನಗೊಂಡಿದ್ದರು. ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷವೇ ದುರಂತಕ್ಕೆ ಕಾರಣ ಎಂಬ ಆರೋಪ ಕೇಳಿಬಂದಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಕಾಡುಗೋಡಿ ಪೊಲೀಸರು ಐವರು ಅಧಿಕಾರಿಗಳನ್ನು ಬಂಧಿಸಿದ್ದರು.

ಇದೀಗ ಬಂಧಿತ ಐವರು ಅಧಿಕಾರಿಗಳನ್ನು ಸ್ಟೇಷನ್ ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ. ಇನ್ನು ತಾಯಿ-ಮಗು ಸಾವಿನ ಪ್ರಕರಣ ಸಂಬಂಧ ಬೆಸ್ಕಾಂ ನ ಐವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read