ಚಿತ್ರದುರ್ಗ: ತೋಟದಲ್ಲಿ ಕಬ್ಬಿಣದ ಕಂಬ ನೆಡುವಾಗ ವಿದ್ಯುತ್ ತಂತಿ ತಗುಲಿ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಇಲ್ಲಿನ ಹೊಳಲ್ಕೆರೆ ತಾಲೂಕಿನ ಕಾಳಘಟ್ಟ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ದಾವಣಗೆರೆ ಮೂಲದ ಕಾರ್ಮಿಕರಾದ ನಜೀರ್, ಫಾರುಕ್ ಹಾಗೂ ಹೊಳಲ್ಕೆರೆಯ ಶ್ರೀನಿವಾಸ್ ಮೃತ ದುರ್ದೌವಿಗಳು.
ತೋಟದಲ್ಲಿ ಕಬ್ಬಿಣದ ಕಂಬ ನೆಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ಮೂವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೂವರು ಮೃತಪಟ್ಟಿದ್ದಾರೆ.
ಚಿಕ್ಕಜಾಜೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.