HomeKarnatakaಕರಾವಳಿಯಲ್ಲಿ ಮಹಾಮಳೆಗೆ ಮತ್ತೊಂದು ಬಲಿ: ವಿದ್ಯುತ್ ಪ್ರವಹಿಸಿ ಯುವತಿ ಸಾವು: ನಿನ್ನೆಯಿಂದ 7 ಜನ ದುರ್ಮರಣ

ಕರಾವಳಿಯಲ್ಲಿ ಮಹಾಮಳೆಗೆ ಮತ್ತೊಂದು ಬಲಿ: ವಿದ್ಯುತ್ ಪ್ರವಹಿಸಿ ಯುವತಿ ಸಾವು: ನಿನ್ನೆಯಿಂದ 7 ಜನ ದುರ್ಮರಣ

ಮಂಗಳೂರು: ಕರಾವಳಿಯಲ್ಲಿ ಮಹಾಮಳೆಗೆ ಮತ್ತೊಬ್ಬರು ಬಲಿಯಾಗಿದ್ದಾರೆ, ಶಿಬಾಜೆ ಗ್ರಾಮದ ಬರ್ಗುಲಾ ನಿವಾಸಿ ಪ್ರತಿಕ್ಷಾ ಶೆಟ್ಟಿ(20) ಮೃತಪಟ್ಟವರು ಎನ್ನಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಪ್ರತಿಕ್ಷಾ ಶೆಟ್ಟಿ ಮನೆಯ ಬಳಿ ಕಂಬದಿಂದ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾರೆ. ಪಾರ್ಸೆಲ್ ತೆಗೆದುಕೊಳ್ಳಲು ಅವರು ಮನೆಯಿಂದ ಹೊರಗೆ ಬಂದಾಗ ಘಟನೆ ನಡೆದಿದೆ.

ಮನೆ ಬಳಿ ಇದ್ದ ಕಂಬದಿಂದ ಮಳೆ ನೀರಿನಲ್ಲಿ ವಿದ್ಯುತ್ ಪ್ರವಹಿಸಿದ್ದರಿಂದ ಯುವತಿ ಪ್ರತಿಕ್ಷಾ ಮೃತಪಟ್ಟಿದ್ದಾರೆ. ಕೊಕ್ಕಡದಲ್ಲಿ ಮೆಡಿಕಲ್ ಶಾಪ್ ನಲ್ಲಿ ಪ್ರತಿಕ್ಷಾ ಕೆಲಸ ಮಾಡುತ್ತಿದ್ದರು. ಅವರ ಮೃತದೇಹವನ್ನು ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆಯಿಂದ ಮಳೆ ಸಂಬಂಧಿ ಅನಾಹುತದಿಂದ 7 ಜನ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular