ಕೊಡಗು: ರಾಜ್ಯದಲ್ಲಿ ಆನೆ-ಮಾನವ ಸಂಘರ್ಷ ಮುಂದುವರೆದಿದೆ. ಕಾಡಾನೆ ದಾಳಿಗೆ ವೃದ್ಧರೊಬ್ಬರು ಬಲಿಯಾಗಿರುವ ಘಟನೆ ಕೊಡಗಿನಲ್ಲಿ ನಡೆದಿದೆ.
ಮಡಿಕೇರಿ ತಾಲೂಕಿನ ಚೆಂಬು ಗ್ರಾಮದ ದಬ್ಬಡ್ಕ ಬಳಿ ಕಾಡಾನೆ ದಾಳಿ ನಡೆಸಿದ್ದು, ಕೊಪ್ಪದ ಮನೆ ನಿವಾಅಸಿ ರೈತ ಶಿವಪ್ಪ (72) ಬಲಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಕ್ಷಣ ಕಾಡಾನೆ ಸೆರೆಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.