ವಿರಾಜಪೇಟೆ: ಕಾಡಾನೆ ದಾಳಿಗೆ ಕೂಲಿಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟ ಗ್ರಾಮದಲ್ಲಿ ನಡೆದಿದೆ.
ಹನುಮಂತ (57) ಕಾಡಾನೆ ಅದಳಿಗೆ ಬಲಿಯಾದ ಕಾರ್ಮಿಕ. ಎಮ್ಮೆ ಗುಂಡಿ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಕಾಡಾನೆ ಸೆರೆ ಹಿಡಿಯದ ಅರಣ್ಯ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿಯೇ ಘಟನೆಗೆ ಕಾರಣ, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
