ಮಂಗಳೂರು: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದಲ್ಲಿ ನಡೆದಿದೆ.
ಇಲ್ಲಿನ ಸೌತಡ್ಕ ಗುಂಡಿಯಲ್ಲಿ ಈ ಘಟನೆ ನಡೆದಿದೆ. 60 ವರ್ಷದ ಬಾಲಕೃಷ್ಣ ಕಾಡಾನೆ ದಾಳಿಗೆ ಮೃತಪಟ್ಟಿದ್ದಾರೆ. ಇಂದು ಬೆಳಿಗ್ಗೆ ಕಾಡಾನೆಗೆಗಳ ಹಿಂಡು ಕೊಕ್ಕಡ ಗ್ರಾಮದಲ್ಲಿ ದಾಳಿ ನಡೆಸಿದ್ದು, ಸ್ಥಳೀಯರು ಕಾಡಾನೆಗಳನ್ನು ಓಡಿಸಲು ಯತ್ನಿಸಿದ್ದಾರೆ. ಈ ವೇಳೆ ಬಾಲಕೃಷ್ಣ ಮೇಲೆ ಆನೆ ದಾಳಿ ನಡೆಸಿದೆ.
ಕಾಡಾನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಬಾಲಕೃಷ್ಣ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಠಾಣೆ ಪೊಲೀಸರು, ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.