HomeKarnatakaBREAKING: ಕಾಡಾನೆ ದಾಳಿ: ಮತ್ತೋರ್ವ ರೈತ ಬಲಿ

BREAKING: ಕಾಡಾನೆ ದಾಳಿ: ಮತ್ತೋರ್ವ ರೈತ ಬಲಿ

ಹಾಸನ: ಹಾಜ್ಯದಲ್ಲಿ ಮಾನವ ಹಾಗೂ ವನ್ಯಜೀವಿಗಳ ಸಂಘರ್ಷ ಮುಂದುವರೆದಿದೆ. ಆಹಾರಕಾಗಿ ಕಾಡು ಪ್ರಾಣಿಗಳು ಗ್ರಾಮಗಳು, ನಗರಗಳಿಗೆ ಆಗಮಿಸುತ್ತಿದ್ದು, ಮನುಷ್ಯನ ಮೇಲೆ ನಿರಂತರವಾಗಿ ದಾಳಿ ನಡೆಸಿತ್ತಿವೆ. ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿಯಾಗಿರುವ ದಾರುಣ ಘಟನೆ ಹಾಸನದಲ್ಲಿ ನಡೆದಿದೆ.

ಕೊಡಗು, ಚಿಕ್ಕಮಗಳೂರು, ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಾಡಾನೆ ಹಾವಳಿಗಳು ಹೆಚ್ಚಾಗಿದ್ದು, ಗ್ರಾಮಸ್ಥರು ಜೀವ ಕೈಲಿ ಹಿಡಿದು ಬದುಕಬೇಕಾದ ಸ್ಥಿತಿ ಇದೆ. ಇಂದು ಹಾಸನದಲ್ಲಿ ಕಾಡಾನೆ ದಾಳಿಗೆ ರೈತರೊಬ್ಬರು ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಣಗುಪ್ಪೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರೈತ ರಾಜಶೆಟ್ಟಿ (56) ಕಾಡಾನೆ ದಾಳಿಗೆ ಬಲಿಯಾದವರು. ಬೆಳಗ್ಗೆ ತೋಟಕ್ಕೆ ತೆರಳಿದ್ದ ರಾಜಶೆಟ್ಟಿ ಅವರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದ್ದು, ಸೊಂಡಿಲಿನಿಂದ ಎತ್ತಿ ಬಿಸಾಡಿ ತುಳಿದು ರೈತನನನ್ನು ಸಾಯಿಸಿದೆ.

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಾಡಾನೆಗಳನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular