ರಾಮನಗರ: ಬೇಸಿಗೆ ರಜೆ ಜೊತೆಗೆ ವೀಕೆಂಡ್ ಇರುವುದರಿಂದ ಸಂಗಮಕ್ಕೆ ಹೋಗಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿದೆ. ಕಾವೇರಿನದಿಯಲ್ಲಿ ಈಜಾಡಲು ಹೋಗಿದ್ದ ಪ್ರವಾಸಿಗರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿರುವ ಘಟನೆ ರಾಮನಗರದ ಸಂಗಮದಲ್ಲಿ ನಡೆದಿದೆ.
ನೀರು ಹುಡುಕುತ್ತಾ ನದಿಗೆ ಬಂದ ಕಾಡಾನೆ ನಡಿಯಲ್ಲಿ ಈಜುತ್ತಿದ್ದ ಪ್ರವಾಸಿಗರ ಮೇಲೆ ದಾಳಿ ನಡೆಸಿದೆ. ಆನೆ ದಾಳಿ ನಡೆಸುತ್ತಿದ್ದಂತೆ ಪ್ರವಾಸಿಗರು ಜೀವ ಉಳಿಸಿಕೊಳ್ಳಲು ದಿಕ್ಕಾಪಾಲಾಗಿ ಓಡಿದ್ದಾರೆ. ಈ ವೇಳೆ ಓರ್ವ ಮಹಿಳೆಯ ಮೇಲೆ ಕಾಡಾನೆ ದಾಳಿ ನಡೆಸಿದೆ.
ಮಹಿಳೆ ಗಾಯಗೊಂಡಿದ್ದು, ಗಾಯಾಳು ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ಬೆನ್ನಲ್ಲೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ. ಕೋಡಿಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

