HomeKarnatakaಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿ

ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿ

ಮಡಿಕೇರಿ: ಕಾಡಾನೆ ಹಾಗೂ ಮಾನವ ಸಂಘರ್ಷ ಮುಂದುವರೆದಿದೆ. ಕಾಡಾನೆ ದಾಳಿಗೆ ಕಾಅಫಿ ಬೆಳೆಗಾರರೊಬ್ಬರು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ನಡೆದಿದೆ.

ಮೃತರನ್ನು ಕಾಯಿಮಾನಿ ನಿವಾಸಿ ರತ್ತು ಎಂದು ಗುರುತಿಸಲಾಗಿದೆ. ಎಂದಿನಂತೆ ರತ್ತು ಅವರು ತಮ್ಮ ಕಾಫಿ ತೋಟಕ್ಕೆ ಹೋಗಿದ್ದರು. ಈ ವೇಳೆ ಏಕಾಏಕಿ ಎದುರಾಅದ ಕಾಡಾನೆ ದಾಳಿ ನಡೆಸಿದೆ. ಕಾಲಿನಿಂದ ತಿಳಿದು ರತ್ತು ಅವರನ್ನು ಸಾಯಿಸಿದೆ.

ಕಾಡಾನೆ ದಾಳಿಗೆ ಗಂಭೀರವಾಗಿ ಹಲ್ಲೆಗೊಳಗಾದ ರತ್ತು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಳೆದ ಕೆಲ ದಿನಗಳಿಂದ ಶ್ರೀಮಂಗಲ ಹೋಬಳಿಯ ಕಿರ್ಚಿ ಹಾಗೂ ಕಾಯಿಮಾನಿ ಭಾಗದಲ್ಲಿ 8-10 ಕಾಡಾನೆಗಳು ಬೀಡು ಬಿಟ್ಟಿವೆ. ಇದರಿಂದಾಗಿ ಆಭಾಗದ ಜನರು ತೋಟದ ಕೆಲಸಕ್ಕೆ ಹೋಗಲು ಜೀವಭಯದಲ್ಲಿ ಇರಬೇಕಾದ ಸ್ಥಿತಿ ನಿರ್ಮಾಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರಣ್ಯ ಇಲಾಖೆ ಸಿಬ್ಬಂದಿ ಕಾಡಾನೆ ಹಿಂಡನ್ನು ಕಾಡಿಗೆ ಅಟ್ಟುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಕಾಡಾನೆ ದಾಳಿಯಿಂದ ಗ್ರಾಮಸ್ಥರು ಆತಂಕದಲ್ಲಿ ಕಾಲ ಕಳೆಯುವಂತಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular