HomeKarnatakaಅರಣ್ಯ ಇಲಾಖೆ ಸಿಬ್ಬಂದಿಯಿಂದ ಮತ್ತೊಂಡು ಎಡವಟ್ಟು: ಆನೆ ಓಡಿಸುವ ಕಾರ್ಯಾಚರಣೆ ವೇಳೆ ಓರ್ವನಿಗೆ ತಗುಲಿದ ಗುಂಡು;...

ಅರಣ್ಯ ಇಲಾಖೆ ಸಿಬ್ಬಂದಿಯಿಂದ ಮತ್ತೊಂಡು ಎಡವಟ್ಟು: ಆನೆ ಓಡಿಸುವ ಕಾರ್ಯಾಚರಣೆ ವೇಳೆ ಓರ್ವನಿಗೆ ತಗುಲಿದ ಗುಂಡು; ಇನ್ನೋರ್ವ ಪಾರು

ಮಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿಗಳ ಗುಂಡೇಟಿಗೆ ಮೂವರು ಬಲಿಯಾಗಿರುವ ಘಟನೆ ಬೆನ್ನಲ್ಲೇ ರಾಜ್ಯದಲ್ಲಿ ಅರಣ್ಯ ಇಲಾಖೆಯಿಂದ ಮತ್ತೊಂದು ಎಡವಟ್ಟು ಸಂಭವಿಸಿದೆ. ಆನೆ ಓಡಿಸುವ ಕಾರ್ಯಾಚರಣೆ ವೇಳೆ ಅರಣ್ಯ ಸಿಬ್ಬಂದಿ ಬಂದೂಕಿನಿಂದ ಗುಂಡು ಹಾರಿ ಓರ್ವ ಗಂಭೀರವಗೈ ಗಾಯಗೊಂಡಿದ್ದು, ಮತ್ತೋರ್ವ ಬಚಾವಾಗಿರುವ ಘಟನೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಬೆಂಗಮಲೆ ಎಂಬಲ್ಲಿ ಕಾಡಾನೆಗಳನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆ ವೇಳೆ ಅರಣ್ಯ ಸಿಬ್ಬಂದಿ ಹಾರಿಸಿದ ಗುಂಡು ತಗುಲಿ ಬೈಕ್ ಸವಾರನೊಬ್ಬ ಗಾಯಗೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮತ್ತೊಬ್ಬ ಸವಾರನ ಶರ್ಟ್ ಜೇಬಿನಲ್ಲಿದ್ದ ಮೊಬೈಲ್‌ಗೆ ಗುಂಡು ತಗುಲಿದ್ದು, ಆತ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಐವರ್ನಾಡು ವ್ಯಾಪ್ತಿಯಲ್ಲಿ ಅರಣ್ಯ ಸಿಬ್ಬಂದಿ ಕಾಡಾನೆಗಳನ್ನು ಓಡಿಸಲು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಈ ಅನಾಹುತ ಸಂಭವಿಸಿದೆ. ಅರಣ್ಯ ಸಿಬ್ಬಂದಿ ಹಾರಿಸಿದ ಗುಂಡು, ಅದೇ ಮಾರ್ಗವಾಗಿ ಬೈಕ್‌ನಲ್ಲಿ ತೆರಳುತ್ತಿದ್ದ ರಾಘವ ಪ್ರಭು ಎಂಬುವವರ ಕಾಲಿಗೆ ತಗುಲಿದೆ. ತಕ್ಷಣವೇ ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅರಣ್ಯಾಧಿಕಾರಿಗಳೇ ಚಿಕಿತ್ಸಾ ವೆಚ್ಚವನ್ನು ಭರಿಸಿ ರಾಜಿ ಸಂಧಾನಕ್ಕೆ ಮುಂದಾಗಿದ್ದರಿಂದ ಅವರು ಯಾವುದೇ ಪೊಲೀಸ್ ದೂರು ದಾಖಲಿಸಿಲ್ಲ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ಘಟನೆಯಲ್ಲಿ ಮತ್ತೊಬ್ಬ ಸವಾರ ಧನರಾಜ್ ಎಂಬುವವರು ಕೂದಲೆಳೆಯ ಅಂತರದಲ್ಲಿ ಸಾವಿನ ದವಡೆಯಿಂದ ಪಾರಾಗಿದ್ದಾರೆ. ಗುಂಡಿನ ಚೂರು ನೇರವಾಗಿ ಧನರಾಜ್ ಅವರ ಎದೆಯ ಭಾಗಕ್ಕೆ ನುಗ್ಗುತ್ತಿತ್ತು. ಆದರೆ ಅವರ ಶರ್ಟ್ ಜೇಬಿನಲ್ಲಿ ಇಟ್ಟುಕೊಂಡಿದ್ದ ಮೊಬೈಲ್‌ಗೆ ಗುಂಡು ತಗುಲಿದ್ದರಿದ್ದ ಅವರು ಬಚಾವ್ ಆಗಿದ್ದಾರೆ. ಮೊಬೈಲ್​​ ಜಖಂಗೊಂಡಿದೆ. ಅರಣ್ಯ ಇಲಾಖೆಯ ಸಿಬ್ಬಂದಿಗಳ ಸಾಲು ಸಾಲು ಅವಾಂತರಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular