ಬೆಂಗಳೂರು: ಕಾಡಾನೆ ದಾಳಿಗೆ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಡೆದಿದೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ದುನಸಂದ್ರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದುಂಡಮಾದ (55) ಮೃತ ರೈತ. ಜಮೀನಿನಲ್ಲಿ ನೀರು ಹಾಯಿಸಲು ಹೋಗಿದ್ದಾಗ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ಕುಟುಂಬದವರು ಜಮೀನು ಬಳಿ ಹೋಗಿದ್ದಾಗ ಜಮೀನಿನಲ್ಲಿ ರೈತ ಮೃತಪಟ್ಟಿರುವುದು ಗೊತ್ತಾಗಿದೆ.
ಬನ್ನೇರುಘಟ್ಟ ಅರಣ್ಯ ಪ್ರದೇಶದಿಂದ ಬಂದಿರುವ ಕಾಡಾನೆ ರೈತನ ಮೇಲೆ ದಾಳಿ ನಡೆಸಿದ್ದು, ರೈತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

