HomeKarnatakaBIG NEWS: ಜಮೀನಿಗೆ ಹೋಗಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ; ಸ್ಥಳದಲ್ಲೇ ಮಹಿಳೆ ಸಾವು

BIG NEWS: ಜಮೀನಿಗೆ ಹೋಗಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ; ಸ್ಥಳದಲ್ಲೇ ಮಹಿಳೆ ಸಾವು

ಮಂಡ್ಯ: ಕಾಡಾನೆ ದಾಳಿಗೆ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲೂಕಿನ ಲಾಳನಕೆರೆ ಗ್ರಾಮದಲ್ಲಿ ನಡೆದಿದೆ.

40 ವರ್ಷದ ಸಾಕಮ್ಮ ಮೃತ ಮಹಿಳೆ. ಬೆಳಿಗ್ಗೆ ಜಮೀನಿಗೆ ಹೋಗಿದ್ದ ಮಹಿಳೆಯ ಮೇಲೆ ಕಾಡಾನೆ ದಾಳಿ ನಡೆಸಿ, ತುಳಿದುಹಾಕಿದೆ. ಮಹಿಳೆ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

ಕಾಡಾನೆ ದಾಳಿಗೆ ಸುತ್ತಮುತ್ತಲ ಗ್ರಾಮಸ್ಥರು ಆತಂಕಗೊಂಡಿದ್ದು, ಆನೆ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular