ಎಲ್ಲೂರು: ಎಕ್ಸ್ ಪ್ರೆಸ್ ರೈಲು ಡಿಕ್ಕಿಯಾಗಿ ಮೂವರು ಮಹಿಳೆಯರು ಹಾಗೂ ಓರ್ವ ಯುವಕ ಸಾವನ್ನಪ್ಪಿರುವ ದಾರುಣ ಘಟನೆ ಆಂಧ್ರಪ್ರದೇಶದ ಏಲೂರು ಬಳಿಯ ಚೇಬ್ರೋಲು ರೈಲು ನಿಲ್ದಾಣದಲ್ಲಿ ನಡೆದಿದೆ.
ಏಲೂರು ಜಿಲ್ಲೆಯ ಉಂಗುಟೂರು ಮಂಡಲದ ಚೇಬ್ರೋಲು ರೈಲು ನಿಲ್ದಾಣದಲ್ಲಿ ಈ ದುರಂತ ಸಂಭವಿಸಿದೆ. ರೈಲು ನಿಲ್ದಾಣದಲ್ಲಿ ಹಳಿ ದಾಟುತ್ತಿದ್ದಾಗ ಚರ್ಲಪಲ್ಲಿ-ಶಾಲಿಮಾರ್ ಎಕ್ಸ್ ಪ್ರೆಸ್ ರೈಲು ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ.
ಅಪಘಾತದಲ್ಲಿ ಮೃತಪಟ್ತಓರ್ವ ಮಹಿಳೆಯ ಗುರುತು ಪತ್ತೆಯಾಗಿದ್ದು, ಆಕೆಯನ್ನು ಶೇಖ್ ಹಸೀನಾ ಎಂದು ಗುರುತಿಸಲಾಗಿದೆ. ಉಳಿದ ಮೂವರ ಗುರುತು ಪತ್ತೆಯಾಗಿಲ್ಲ. ಚೇಂಬ್ರೋಲು ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

