ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಪ್ರಸ್ತುತ ಪ್ರಾದೇಶಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಖತಾರ್‌ನಲ್ಲಿರುವ ಭಾರತೀಯ ನಾಗರಿಕರಿಗಾಗಿ ಅಲ್ಲಿನ ಭಾರತೀಯ ರಾಯಭಾರ ಕಚೇರಿಯು ಶನಿವಾರ ತುರ್ತು ಸಲಹೆಯನ್ನು (Advisory) ಬಿಡುಗಡೆ ಮಾಡಿದೆ.
ಖತಾರ್‌ನಲ್ಲಿರುವ ಎಲ್ಲಾ ಭಾರತೀಯ ನಾಗರಿಕರು ಮುನ್ನೆಚ್ಚರಿಕೆ ವಹಿಸಬೇಕು, ಸ್ಥಳೀಯ ಸುದ್ದಿಗಳ ಮೇಲೆ ನಿಗಾ ಇಡಬೇಕು ಮತ್ತು ರಾಯಭಾರ ಕಚೇರಿ ಹಾಗೂ ಸ್ಥಳೀಯ ಅಧಿಕಾರಿಗಳು ನೀಡುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಲಾಗಿದೆ.
ಸಹಾಯವಾಣಿ ಸಂಖ್ಯೆ: ಯಾವುದೇ ತುರ್ತು ಸಂದರ್ಭ ಅಥವಾ ವಿಚಾರಣೆಗಾಗಿ ರಾಯಭಾರ ಕಚೇರಿಯು ಈ ಕೆಳಗಿನ ಸಂಪರ್ಕ ವಿವರಗಳನ್ನು ನೀಡಿದೆ:
- 24/7 ಸಹಾಯವಾಣಿ ಸಂಖ್ಯೆ: 00974-55647502
- ಇಮೇಲ್: [email protected]
ಸಾಮಾನ್ಯ ಕಾರ್ಯನಿರ್ವಹಣೆ: ರಾಯಭಾರ ಕಚೇರಿಯು ಎಂದಿನಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ಜಂಟಿ ಮಿಲಿಟರಿ ದಾಳಿ ನಡೆಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಕೇವಲ ಖತಾರ್ ಮಾತ್ರವಲ್ಲದೆ, ಜೋರ್ಡಾನ್, ಇಸ್ರೇಲ್ ಮತ್ತು ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಗಳೂ ಸಹ ತಮ್ಮ ನಾಗರಿಕರಿಗೆ ಇದೇ ರೀತಿಯ ಎಚ್ಚರಿಕೆಯ ಸೂಚನೆಗಳನ್ನು ನೀಡಿವೆ. ಜೋರ್ಡಾನ್‌ನಲ್ಲಿರುವ ಭಾರತೀಯ ಪ್ರವಾಸಿಗರಿಗೆ ವಾಣಿಜ್ಯ ವಿಮಾನಗಳ ಸಂಚಾರ ಸ್ಥಗಿತಗೊಳ್ಳುವ ಮುನ್ನವೇ ದೇಶ ತೊರೆಯುವಂತೆ ಸೂಚಿಸಲಾಗಿದೆ. ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಈ ಯುದ್ಧ ಸದೃಶ್ಯ ಸನ್ನಿವೇಶದಿಂದಾಗಿ ಭಾರತ ಸರ್ಕಾರವು ತನ್ನ ನಾಗರಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ.

