HomeLatest Newsಸಾರ್ವಜನಿಕ ಸಾರಿಗೆಗಳಲ್ಲಿ ತುರ್ತು ನಿರ್ಗಮನ ಕಡ್ಡಾಯ, ಇಲ್ಲದಿದ್ದಲ್ಲಿ FC ನೀಡದಂತೆ ಕಟ್ಟುನಿಟ್ಟಿನ ಆದೇಶ

ಸಾರ್ವಜನಿಕ ಸಾರಿಗೆಗಳಲ್ಲಿ ತುರ್ತು ನಿರ್ಗಮನ ಕಡ್ಡಾಯ, ಇಲ್ಲದಿದ್ದಲ್ಲಿ FC ನೀಡದಂತೆ ಕಟ್ಟುನಿಟ್ಟಿನ ಆದೇಶ

ಬೆಂಗಳೂರು: ಸಾರ್ವಜನಿಕ ಸಾರಿಗೆಗಳಲ್ಲಿ ತುರ್ತು ನಿರ್ಗಮದ ಬಾಗಿಲುಗಳಿಲ್ಲದಿದ್ದರೆ ಭೌತಿಕ ಕ್ಷಮತೆ ದೃಢೀಕರಣ ಪತ್ರ – ಎಫ್‌ಸಿ ಮಾಡದಂತೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ.

ಬಸ್‌ಗಳಲ್ಲಿ ಯಾವುದೇ ರೀತಿಯ ಸ್ಫೋಟಕಗಳನ್ನು ಸಾಗಿಸಬಾರದು ಎಂದು ಕಟ್ಟಪ್ಪಣೆ ಮಾಡಿದ್ದೇವೆ. ಪ್ರಯಾಣಿಕರನ್ನು ಹೊರತುಪಡಿಸಿ ಅನಗತ್ಯವಾದ ಲಗೇಜ್‌ಗಳನ್ನು ಸಾಗಿಸದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಖಾಸಗಿ ಬಸ್ ದುರಂತದ ಬಗ್ಗೆ ಸಚಿವರು ವಿಷಾದ ವ್ಯಕ್ತಪಡಿಸಿದ್ದಾರೆ. ಆಂಧ್ರಪ್ರದೇಶದಲ್ಲಿ ಬಸ್ ದುರಂತದ ನಂತರ ಸಾರಿಗೆ ಬಸ್ ಗಳಲ್ಲಿ ಯಾವುದೇ ರೀತಿಯ ಸ್ಪೋಟಕ ಸಾಗಿಸದಂತೆ ಕಟ್ಟಪ್ಪಣೆ ಮಾಡಲಾಗಿದೆ. ಪ್ರಯಾಣಿಕರನ್ನು ಹೊರತುಪಡಿಸಿ ಅನಗತ್ಯ ಲಗೇಜ್ ಸಾಗಿಸಿದಂತೆ ಕ್ರಮ ಕೈಗೊಳ್ಳಲಾಗಿದೆ. ಐಷಾರಾಮಿ ಬಸ್ ಗಳು 8 ರಿಂದ 10 ಅಡಿ ಎತ್ತರ ಇರುತ್ತವೆ ಹಿರಿಯರು, ಮಕ್ಕಳು, ಹೆಣ್ಣು ಮಕ್ಕಳು ಅಷ್ಟು ಎತ್ತರದಿಂದ ಜಿಗಿಯಲು ಸಾಧ್ಯವಾಗುವುದಿಲ್ಲ. ಹೀಗಾಗಿ ಎಲ್ಲಾ ಸಾರ್ವಜನಿಕ ಸಾರಿಗೆಗಳಿಗೆ ಕಡ್ಡಾಯ ತುರ್ತು ನಿರ್ಗಮನ ಬಾಗಿಲು ಅಳವಡಿಸುವಂತೆ ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular