ಬೆಂಗಳೂರು : ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜಕೀಯ ಚರ್ಚೆಗಳ ನಡುವೆ, ಮುಖ್ಯಮಂತ್ರಿಗಳ ನಿವಾಸದಲ್ಲಿ ನಡೆದ ಉಪಹಾರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಪ್ಪಿಕೊಂಡು ಪರಸ್ಪರ ಶುಭಾಶಯ ಕೋರುವ ಮೂಲಕ ಒಗ್ಗಟ್ಟಿನ ಸಂದೇಶ ರವಾನಿಸಿದ್ದಾರೆ.
ಈ ವಿಶೇಷ ಕ್ಷಣದಲ್ಲಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪಾದ ಮುಟ್ಟಿ ನಮಸ್ಕರಿಸಿದ್ದು, ಈ ಭಾವನಾತ್ಮಕ ದೃಶ್ಯವನ್ನು ಕಾಣಬಹುದು.
ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ತೀವ್ರಗೊಂಡಿರುವ ಬೆನ್ನಲ್ಲೇ, ಸಿಎಂ ಸಿದ್ದರಾಮಯ್ಯ ಅವರ ನಿವಾಸದಲ್ಲಿ ನಡೆದ ಉಪಹಾರ ಸಭೆಯಲ್ಲಿ ಸಿಎಂ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಪ್ಪಿಕೊಂಡು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಳ್ಳುವ ಮೂಲಕ ಒಗ್ಗಟ್ಟಿನ ಸಂದೇಶ ರವಾನಿಸಿದ್ದಾರೆ ಈ ವೇಳೆ ಡಿಸಿಎಂ ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರ ಪಾದ ಮುಟ್ಟಿ ನಮಸ್ಕರಿಸುವ ಮೂಲಕ ಗಮನ ಸೆಳೆದಿದ್ದಾರೆ .
ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ ಮುಖ್ಯಮಂತ್ರಿಗಳು ರಾಜೀನಾಮೆ ನೀಡಲು ಸಿದ್ಧರಿದ್ದರೂ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಸ್ತುತ ಬೆಂಗಳೂರಿನಲ್ಲಿ ಇಲ್ಲದಿರುವುದು ಈ ಪ್ರಕ್ರಿಯೆಯಲ್ಲಿ ಗೊಂದಲ ಮತ್ತು ಸಣ್ಣ ವಿಳಂಬಕ್ಕೆ ಕಾರಣವಾಗಿದೆ.
ಸಾಂವಿಧಾನಿಕ ಮಾರ್ಗ: ರಾಜ್ಯಪಾಲರು ಕೇಂದ್ರ ಸ್ಥಾನದಲ್ಲಿ ಇಲ್ಲದಿದ್ದರೂ, ಸಿಎಂ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಸಲ್ಲಿಸಲು ಸಂವಿಧಾನದಲ್ಲಿ ಅವಕಾಶವಿದೆ . ಆದಾಗ್ಯೂ, ರಾಜ್ಯಪಾಲರು ವಾಪಸ್ ಬಂದ ನಂತರ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕವಷ್ಟೇ ರಾಜೀನಾಮೆ ಅಧಿಕೃತವಾಗಿ ಅಂಗೀಕಾರವಾಗಲಿದೆ.
ಉಪರಾಷ್ಟ್ರಪತಿಗಳ ಆಗಮನದ ಹಿನ್ನೆಲೆಯಲ್ಲಿ ಶಿಷ್ಟಾಚಾರದ ಪ್ರಕಾರ, ರಾಜ್ಯಪಾಲರು ಇಂದು ಸಂಜೆ ಅಥವಾ ತಡರಾತ್ರಿಯೊಳಗೆ ಬೆಂಗಳೂರಿಗೆ ಮರಳುವ ಸಾಧ್ಯತೆ ಇದೆ. ಬಕ್ರೀದ್ ಹಬ್ಬದ ರಜೆಯ ನಡುವೆಯೂ, ರಾಜಕೀಯ ಸನ್ನಿವೇಶದ ಕಾರಣದಿಂದ ಲೋಕಭವನದ ಹಿರಿಯ ಅಧಿಕಾರಿಗಳಿಗೆ ತುರ್ತು ಕರ್ತವ್ಯಕ್ಕೆ ಹಾಜರಾಗಲು ಸೂಚನೆ ನೀಡಲಾಗಿದೆ.

