HomeKarnatakaನೌಕರರ ಕಾರ್ಯಕ್ಷಮತೆ ಪರೀಕ್ಷೆ ರದ್ದುಪಡಿಸಲು ಸರ್ಕಾರ ಸೂಚನೆ

ನೌಕರರ ಕಾರ್ಯಕ್ಷಮತೆ ಪರೀಕ್ಷೆ ರದ್ದುಪಡಿಸಲು ಸರ್ಕಾರ ಸೂಚನೆ

ಬೆಂಗಳೂರು: ಶಿಕ್ಷಣ ಇಲಾಖೆ ವ್ಯಾಪ್ತಿಯ ಎಲ್ಲಾ ಸಿ ವೃಂದದ ಬೋಧಕೇತರ ನೌಕರರಿಗೆ ಜನವರಿ 28ರಂದು ಶನಿವಾರ ನಡೆಸಲು ಉದ್ದೇಶಿಸಿದ್ದ ಕಾರ್ಯಕ್ಷಮತೆ ಪರೀಕ್ಷೆ ರದ್ದುಪಡಿಸುವಂತೆ ಸರ್ಕಾರ ಸೂಚನೆ ನೀಡಿದೆ.

ಸಿ ವೃಂದದ ಬೋಧಕೇತರ ನೌಕರರಲ್ಲಿ ಕಾರ್ಯಕ್ಷಮತೆ ಮತ್ತು ವಿಷಯ ಪರಿಣಿತಿ ಹೆಚ್ಚಳದ ಉದ್ದೇಶದಿಂದ ತರಬೇತಿ ನೀಡಿದ್ದು, ಜನವರಿ 28ರಂದು ಕಾರ್ಯಕ್ಷಮತೆ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗಿತ್ತು. ಈ ಪರೀಕ್ಷೆಯಿಂದ ಮನೋಬಲ ಕುಗ್ಗಲಿದೆ ಎಂದು ಅನೇಕ ಹಿರಿಯ ಸಿಬ್ಬಂದಿ ಆತಂಕ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸುವಂತೆ ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿಕ್ಷಣ ಇಲಾಖೆ ವ್ಯಾಪ್ತಿಯ ಅಧೀಕ್ಷಕರು, ಎಫ್.ಡಿ.ಎ., ಎಸ್.ಡಿ.ಎ. ಇತರೆ ಸಿಬ್ಬಂದಿಯಲ್ಲಿ ಕಾರ್ಯಕ್ಷಮತೆ ಹೆಚ್ಚಿಸಲು ತರಬೇತಿ ನೀಡಿ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿತ್ತು. ಇದನ್ನು ರದ್ದು ಮಾಡಲಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular