ಕೊಪ್ಪಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್ ವ್ಯೂವ್ ಅನ್ನು ಏಪ್ರಿಲ್ 13 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.
ಆಸಕ್ತ 18 ರಿಂದ 34 ವರ್ಷ ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು 2 ಪ್ರತಿಗಳೊಂದಿಗೆ ಮತ್ತು ಆಧಾರ್ ಕಾರ್ಡಿನ ಪ್ರತಿ, ಬಯೋಡಾಟಾ(ರೆಸ್ಯೂಮ್) ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟವ್ಯೂವ್ ನಲ್ಲಿ ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸುವಂತೆ ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

