HomeKarnatakaSSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಖಾಸಗಿ ಕಂಪನಿಗಳಲ್ಲಿ ಉದ್ಯೋಗ

SSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಖಾಸಗಿ ಕಂಪನಿಗಳಲ್ಲಿ ಉದ್ಯೋಗ

 ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅ.8 ರ ಬೆಳಗ್ಗೆ 10 ಗಂಟೆಗೆ  ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪನಗರ, ಸಾಗರರಸ್ತೆ, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ :08182-255293/ 9380663606/ 9535312531 ಗಳನ್ನು ಸಂಪರ್ಕಿಸುವAತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular