ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಖಾಸಗಿ ಕಂಪನಿಗಳಲ್ಲಿ ಉದ್ಯೋಗಾವಕಾಶ

ಚಿತ್ರದುರ್ಗ: ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜುಲೈ 30ರಂದು ಬೆಳಿಗ್ಗೆ 10 ರಿಂದ 2 ಗಂಟೆಯವರೆಗೆ ನೇರ ನೇಮಕಾತಿ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.

ವಿವಿಧ ಖಾಸಗಿ ಕಂಪನಿಗಳು ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಪುರುಷ ಅಥವಾ ಮಹಿಳೆ ಅಭ್ಯರ್ಥಿಗಳನ್ನು ಸಂದರ್ಶನದಲ್ಲಿ ನೇರವಾಗಿ ಆಯ್ಕೆ ಮಾಡಿಕೊಳ್ಳಲಿವೆ. ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಯಾವುದೇ ಪದವಿ ಹೊಂದಿರುವ 18 ರಿಂದ 30ವರ್ಷದೊಳಗಿರುವ ಅಭ್ಯರ್ಥಿಗಳು ಭಾಗವಹಿಸಬಹುದು. ಸಂದರ್ಶನಕ್ಕೆ ಆಗಮಿಸುವಾಗ 5 ಪ್ರತಿ ಬಯೋಡೇಟಾ, ವಿದ್ಯಾರ್ಹತೆ ಪ್ರಮಾಣ ಪತ್ರ ಹಾಗೂ ಪೋಟೋಗಳನ್ನು ತರಬೇಕು.

ಹೆಚ್ಚಿನ ಮಾಹಿತಿಗಾಗಿ ನಗರದ ಸ್ಟೇಡಿಯಂ ರಸ್ತೆ ತಿರುವಿನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿಗೆ ಭೇಟಿ ನೀಡಬಹುದು. ಕಚೇರಿ ದೂರವಾಣಿ ಸಂಖ್ಯೆ 7022459064 8105619020, 9945587060 ಗೆ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read