ಲಿಂಗತ್ವ ಅಲ್ಪಸಂಖ್ಯಾತರಿಗೂ ಶಕ್ತಿ, ಗೃಹ ಯೋಜನೆ ಸೌಲಭ್ಯ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಾಗಿರುವ ಶಕ್ತಿ ಯೋಜನೆ, ಗೃಹಲಕ್ಷ್ಮಿ ಯೋಜನೆಗಳು ಲಿಂಗತ್ವ ಅಲ್ಪಸಂಖ್ಯಾತರಿಗೂ ಲಭ್ಯವಾಗುತ್ತವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ. ಗ್ಯಾರಂಟಿ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಸಾರಿಗೆ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಲಿಂಗತ್ವ ಅಲ್ಪಸಂಖ್ಯಾತರಿಗೆ ನೀಡಲಾಗುತ್ತಿದೆ. ನ್ಯಾಷನಲ್ ಪೋರ್ಟಲ್ ಫಾರ್ ಟ್ರಾನ್ಸ್ ಟೆಂಡರ್ ಸರ್ಟಿಫಿಕೇಷನ್ ವತಿಯಿಂದ ಗುರುತಿನ ಚೀಟಿ ಮತ್ತು ಪ್ರಮಾಣ ಪತ್ರ ಹೊಂದಿದ ಲಿಂಗತ್ವ ಅಲ್ಪಸಂಖ್ಯಾತರು ಮಾಸಿಕ ಎರಡು ಸಾವಿರ ರೂಪಾಯಿ ಪಡೆದುಕೊಳ್ಳಬಹುದಾಗಿದೆ ಎಂದು ಹೇಳಿದ್ದಾರೆ.

ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಆದಾಯ ಉತ್ಪನ್ನ ಚಟುವಟಿಕೆ ಕೈಗೊಳ್ಳಲು 30,000 ಸಹಾಯಧನ ನೀಡಲಾಗುತ್ತಿದೆ. ಮೈತ್ರಿ ಯೋಜನೆ ಅಡಿ ಮಾಸಿಕ 1,200 ಪಿಂಚಣಿಯನ್ನು ಲಿಂಗತ್ವ ಅಲ್ಪಸಂಖ್ಯಾತರಿಗೆ ನೀಡಲಾಗುತ್ತಿದ್ದು, ಸರ್ಕಾರಿ ನೌಕರಿಯಲ್ಲಿ ಶೇಕಡ 1ರಷ್ಟು ಮೀಸಲಾತಿ ಕಲ್ಪಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read