HomeKarnatakaBREAKING: ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಕಾಡುಗಳ್ಳರು ಬಲಿ: ಶಾಗ್ಯ ಅರಣ್ಯ ಪ್ರದೇಶದಲ್ಲಿ ಎನ್ ಕೌಂಟರ್

BREAKING: ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಕಾಡುಗಳ್ಳರು ಬಲಿ: ಶಾಗ್ಯ ಅರಣ್ಯ ಪ್ರದೇಶದಲ್ಲಿ ಎನ್ ಕೌಂಟರ್

ಚಾಮರಾಜನಗರ: ಕಾಡು ಪ್ರಾಣಿಗಳನ್ನು ಬೇಟೆಯಾಡಿ ಮಾಂಸ ಬೇರ್ಪಡಿಸುತ್ತಿದ್ದ ವೇಳೆ ಅರಣ್ಯ ಇಲಾಖೆ ಗುಂಡೇಟಿಗೆ ಮೂವರು ಕಾಡಿಗಳ್ಳರು ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ.

ಶಾಗ್ಯ ವ್ಯಾಪ್ತಿಯ ದಟ್ಟಿ ಅರಣ್ಯಪ್ರದೇಶದಲ್ಲಿ ಕಾಡುಪ್ರಾಣಿಗಳನ್ನು ಬೇಟೆಯಾಡಿದ್ದ ಮೂವರು ಕಾಡುಗಳ್ಳರು, ಪ್ರಾಣಿಗಳ ಮಾಂಸ ಬೇರ್ಪಡಿಸುತ್ತಿದ್ದರು. ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿ ಕೂಡಲೇ ಶಸ್ತ್ರಾಸ್ತ್ರ ಕೆಳಗಿಟ್ಟು ಶರಣಾಗುವಂತೆ ಸೂಚಿಸಿದ್ದಾರೆ. ಆದರೆ ಕಾಡುಗಳ್ಳರು ಶರಣಾಗದೇ ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ಫೈರಿಂಗ್ ನಡೆಸಿದ್ದಾರೆ. ತಕ್ಷಣ ಎಚ್ಚೆತ್ತ ಅರಣ್ಯ ಸಿಬ್ಬಂದಿ ಕೌಂಟರ್ ಫೈರಿಂಗ್ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರಣ್ಯ ಇಲಾಖೆ ಸಿಬ್ಬಂದಿಗಳ ಗುಂಡೇಟಿಗೆ ಮೂವರು ಕಾಡುಗಳ್ಳರು ಸ್ಥಳದಲ್ಲೇ ಸಾವನ್ನಪಿದ್ದಾರೆ. ಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಬೇಟೆಗಾರರು ಅರಣ್ಯ ಸಿಬ್ಬಂದಿ ಎನ್ ಕೌಂಟರ್ ಗೆ ಬಲಿಯಾಗಿದ್ದಾರೆ.

ಮೃತರನ್ನು ಪೀಟರ್, ಕುಮಾರ್, ಅಂತೋಣಿಸ್ವಾಮಿ ಎಂದು ಗುರುತಿಸಲಾಗಿದೆ. ಮೃತದೇಹವನ್ನು ಮೈಸೂರು ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮತ್ತೊಂದೆಡೆ ಹನೂರು ಅರಣ್ಯ ಕಛೇರಿ ಬಳಿ ಮೃತರ ಕುಟುಂಬದವರು ದೌಡಾಯಿಸಿ ಅರಣ್ಯ ಸಿಬ್ಬಂದಿಗಳ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಕಚೇರಿಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular