BREAKING: ಪಹಲ್ಗಾಮ್ ದಾಳಿಯ ಮೂವರು ಶಂಕಿತ ಉಗ್ರರು ಭದ್ರತಾಪಡೆಗಳ ಎನ್ ಕೌಂಟರ್ ಗೆ ಬಲಿ

ಶ್ರೀನಗರ: ಪಹಲ್ಗಾಮ್ ದಾಳಿಯ ಮೂವರು ಶಂಕಿತ ಉಗ್ರರನ್ನು ಭದ್ರತಾಪಡೆ ಹಾಗೂ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಹೊಡೆದುರುಳಿಸಲಾಗಿದೆ.

ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಭದ್ರತಾಪಡೆಗಳು ನಡೆಸಿದ ಎನ್ ಕೌಂಟರ್ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಈ ಮೂಲವರು ಉಗ್ರರು ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾದವರು ಎಂದು ತಿಳಿದಿಬಂದಿದೆ.

ಸೇನೆ, ಜಮ್ಮು-ಕಾಶ್ಮೀರ ಪೊಲೀಸರು, ಸಿಆರ್ ಪಿಎಫ್ ಸೇರಿ ‘ಆಪರೇಷನ್ ಮಹಾದೇವ್’ ಕಾರ್ಯಾಚರಣೆ ನಡೆಸಿದ್ದು, ಮೂವರು ಉಗ್ರರನ್ನು ಸದೆಬಡಿಯಲಾಗಿದೆ.

ಏಪ್ರಿಲ್ 22ರಂದು ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ದಾಳಿ ನಡೆಸಿದ್ದ ಉಗ್ರರು 26 ಪ್ರವಾಸಿಗರನ್ನು ಗುಂಡಿಟ್ಟು ಹತ್ಯೆಗೈದಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read