HomeIndiaBREAKING: ಪುಲ್ವಾಮಾದಲ್ಲಿ ಭದ್ರತಾ ಪಡೆ ಎನ್ ಕೌಂಟರ್ ನಲ್ಲಿ ಭಯೋತ್ಪಾದಕ ಫಿನಿಶ್

BREAKING: ಪುಲ್ವಾಮಾದಲ್ಲಿ ಭದ್ರತಾ ಪಡೆ ಎನ್ ಕೌಂಟರ್ ನಲ್ಲಿ ಭಯೋತ್ಪಾದಕ ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಯೋಧರು, ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ.

ಪುಲ್ವಾಮಾ ಬಳಿ ಗುಂಡಿನ ದಾಳಿ ನಡೆಸಲಾಗಿದ್ದು, ಬಿಎಸ್ಎಫ್ ಯೋಧರು ಓರ್ವ ಉಗ್ರನನ್ನು ಸುತ್ತುವರಿದ್ದಾರೆ. ಕಾರ್ಯಾಚರಣೆ ಮುಂದುವರೆದಿದ್ದು, ಎನ್ ಕೌಂಟರ್ ನಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಲಾಗಿದೆ.

ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆಯುತ್ತಿದೆ. ಒಬ್ಬ ಭಯೋತ್ಪಾದಕನನ್ನು ಹೊಡೆದುರುಳಿಸಲಾಗಿದೆ. ಆದರೆ ಅವನ ದೇಹವನ್ನು ಇನ್ನೂ ಪಡೆಯಲಾಗಿಲ್ಲ. ಪುಲ್ವಾಮಾ ಜಿಲ್ಲೆಯ ಅರ್ಶಿಪೋರಾ ಪ್ರದೇಶದಲ್ಲಿ ಭಯೋತ್ಪಾದಕರ ಇರುವಿಕೆ ಬಗ್ಗೆ ಭದ್ರತಾ ಪಡೆಗಳಿಗೆ ಸುಳಿವು ದೊರೆತ ನಂತರ ಪ್ರಾರಂಭವಾದ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯಲ್ಲಿ ಗುಂಡಿನ ಚಕಮಕಿ ನಡೆದಿದೆ. ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದಾಗ ಉಗ್ರರು ಶೋಧ ತಂಡದ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಬ್ಬ ಭಯೋತ್ಪಾದಕ ಪತನಗೊಂಡಿರುವ ಸಾಧ್ಯತೆಯಿದೆ, ಆತನ ದೇಹವನ್ನು ನೋಡಲಾಗಿದೆ. ಆದರೆ, ಇನ್ನೂ ವಶಕ್ಕೆ ಪಡೆಯಲಾಗಿಲ್ಲ. ಮತ್ತೊಬ್ಬ ಭಯೋತ್ಪಾದಕ ಸಿಕ್ಕಿಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular