ಮಳೆಗಾಲಕ್ಕೆ ಮುನ್ನ ಕೆರೆಗಳ ಒತ್ತುವರಿ ತೆರವುಗೊಳಿಸಿ ಅಭಿವೃದ್ಧಿಗೊಳಿಸಲು ಸಿಎಂ ಸೂಚನೆ

ಬೆಂಗಳೂರು: ಮಳೆಗಾಲದ ಒಳಗಾಗಿ ಕೆರೆ ಒತ್ತುವರಿಯನ್ನು ತೆರವುಗೊಳಿಸಿ, ಕೆರೆಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚನೆ ನೀಡಿದ್ದಾರೆ.

ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಅವರು ಈ ಕುರಿತಾಗಿ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಒಟ್ಟು 40,998 ಕೆರೆಗಳಿದ್ದು, ಇವುಗಳ ಪೈಕಿ ಗ್ರಾಮೀಣಾಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿ 26,365 ಕೆರೆಗಳು, ಸಣ್ಣ ನೀರಾವರಿಯಲ್ಲಿ 3,247, ಬಿಬಿಎಂಪಿ ವ್ಯಾಪ್ತಿಯಲ್ಲಿ 117 ಕೆರೆಗಳಿವೆ. ರಾಜ್ಯದಲ್ಲಿ 30 ಸಾವಿರ ಕೆರೆಗಳ ಸರ್ವೇ ಕಾರ್ಯವನ್ನು ಕಂದಾಯ ಇಲಾಖೆ ಈಗಾಗಲೇ ಪೂರ್ಣಗೊಳಿಸಿದೆ. ಉಳಿದಿರುವ 10,754 ಕೆರೆಗಳ ಸಮೀಕ್ಷೆ ಕಾರ್ಯವನ್ನು ಆರು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದ್ದಾರೆ.

ಕೆರೆ ಒತ್ತುವರಿ ತೆರವು ಕಾರ್ಯ ಬಾಕಿಯಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಮಳೆಗಾಲದ ಒಳಗಾಗಿ ಕೆರೆ ಒತ್ತುವರಿಯನ್ನು ತೆರವುಗೊಳಿಸಿ, ಕೆರೆಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಬೇಕು. ಕೆರೆಗಳ ಸಂರಕ್ಷಣೆ ಕಾರ್ಯವನ್ನು ನರೇಗಾ ಅಡಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಕೈಗೆತ್ತಿಕೊಳ್ಳಬೇಕು ಎಂದು ಹೇಳಿದ್ದಾರೆ.

ಮೀನುಗಾರಿಕಾ ಇಲಾಖೆ ವತಿಯಿಂದ ಎಲ್ಲಾ ಕೆರೆಗಳಿಗೆ ಮೀನು ಮರಿಗಳನ್ನು ಬಿಡುವ ಕಾರ್ಯ ಮಾಡಿದರೆ ಆದಾಯ ಗಳಿಸಲು ಸಾಧ್ಯವಿದೆ. ನಗರ ಪ್ರದೇಶದ ಕೆರೆಗಳು ಮಾತ್ರವಲ್ಲದೆ, ರಾಜ್ಯದ ಎಲ್ಲಾ ಕೆರೆಗಳ ಮಾಲಿನ್ಯದ ಮಟ್ಟವನ್ನು ಪರಿಸರ ಮಾಲಿನ್ಯ ನಿಯ೦ತ್ರಣ ಮ೦ಡಳಿಯ ಅಧಿಕಾರಿಗಳು ಪರಿಶೀಲಿಸಿ ನಿಯಮಿತವಾಗಿ ವರದಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read