HomeKarnatakaಹುಕ್ಕಾ ಬಾರ್ ಮೇಲೆ ದಾಳಿ: ಇಬ್ಬರು ಅರೆಸ್ಟ್

ಹುಕ್ಕಾ ಬಾರ್ ಮೇಲೆ ದಾಳಿ: ಇಬ್ಬರು ಅರೆಸ್ಟ್

ಬೆಂಗಳೂರು: ಬೆಂಗಳೂರು ಹೊರವಲಯದಲ್ಲಿ ಮನೆ ಬಾಡಿಗೆ ಪಡೆದು ಅಕ್ರಮವಾಗಿ ಹುಕ್ಕಾ ಬಾರ್ ನಿರ್ಮಿಸಿ ಪಾರ್ಟಿ ಆಯೋಜಿಸುತ್ತಿದ್ದ ಸಿವಿಲ್ ಎಂಜಿನಿಯರ್ ಸೇರಿದಂತೆ ಇಬ್ಬರನ್ನು ಕುಂಬಳಗೋಡು ಠಾಣೆ ಪೋಲೀಸರು ಬಂಧಿಸಿದ್ದಾರೆ.

ಬಸವೇಶ್ವರನಗರ ಸಮೀಪದ ಮೀನಾಕ್ಷಿ ನಗರದ ಅಜಿತ್ ನಾಯಕ್ ಮತ್ತು ಹಾಸನ ಜಿಲ್ಲೆ ಕಾಳೇನಹಳ್ಳಿ ಗ್ರಾಮದ ಕೆ.ಆರ್. ವರುಣ್ ಅವರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳಿಂದ 5 ಹುಕ್ಕಾ ಪಾಟ್ ಗಳು, 3 ಹುಕ್ಕಾ ಪೈಪ್, 2 ಬಾಕ್ಸ್ ಹುಕ್ಕಾ ಪಾಟ್, ಸೇರಿದಂತೆ ಇತರೆ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ಕುಂಬಳಗೋಡು ಸಮೀಪದ ಕೆಂಚನಪುರ ಗ್ರಾಮದ ಮನೆಯೊಂದರಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಿರುವುದನ್ನು ಗಮನಿಸಿದ ಗಸ್ತು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಕುಂಬಳಗೋಡು ಠಾಣೆ ಇನ್ಸ್ಪೆಕ್ಟರ್ ಕುಮಾರ್ ನೇತೃತ್ವದ ತಂಡ ದಾಳಿ ನಡೆಸಿದ ಹುಕ್ಕಾ ಬಾರ್ ತೆರೆದು ಪಾರ್ಟಿ ಆಯೋಜಿಸುತ್ತಿರುವುದು ಬೆಳಕಿಗೆ ಬಂದಿದೆ. ಇವರು ಹುಕ್ಕಾ ಬಾರ್ ಗೆ ಬರುವವರಿಗೆ ಗಂಟೆಗೆ 650 ರಿಂದ 700 ರೂಪಾಯಿ ದರ ನಿಗದಿ ಮಾಡಿದ್ದರು. ಬಸವೇಶ್ವರನಗರದಲ್ಲಿ ನೆಲೆಸಿದ್ದ ಅಜಿತ್ ನಾಯಕ್ ದೊಮ್ಮಲೂರು ಸಮೀಪದ ಖಾಸಗಿ ಕಂಪನಿಯಲ್ಲಿ ಸಿವಿಲ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ. ತನ್ನ ಸ್ನೇಹಿತರೊಂದಿಗೆ ವಾರಾಂತ್ಯದಲ್ಲಿ ಹುಕ್ಕಾ ಪಾರ್ಟಿಗಳಿಗೆ ಹೋಗುತ್ತಿದ್ದ. ಗಂಟೆಗೆ 650 ರಿಂದ 700 ರೂಪಾಯಿ ದರ ದುಬಾರಿಯಾಗುತ್ತಿತ್ತು. ಹೀಗಾಗಿ ತಾವೇ ಹುಕ್ಕಾ ಬಾರ್ ತೆರೆಯಲು ಯೋಜಿಸಿದ್ದರು. ಇದಕ್ಕೆ ಗೆಳೆಯ ವರುಣ್ ಸಹಕಾರ ನೀಡಿದ್ದ. ಬಾಗಿಲು ಮುಚ್ಚಿರುವ ಹುಕ್ಕಾ ಬಾರ್ ವೊಂದರ ಮಾಲೀಕರನ್ನು ಭೇಟಿಯಾಗಿ ಉಪಕರಣಗಳನ್ನು ಖರೀದಿಸಿದ್ದರು. ನಂತರ ಕೆಂಚನಪುರದಲ್ಲಿ ಮನೆ ಬಾಡಿಗೆ ಪಡೆದು ಅಕ್ರಮವಾಗಿ ತೆರೆದು ಪಾರ್ಟಿಗಳನ್ನು ಆಯೋಜಿಸುತ್ತಿದ್ದರು. ಈ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular