HomeLatest Newsಎಂಜಿನಿಯರಿಂಗ್ ಆಕಾಂಕ್ಷಿಗಳಿಗೆ ಬಿಗ್ ಶಾಕ್: ಸತತ 2ನೇ ವರ್ಷವೂ ಶುಲ್ಕ ಏರಿಕೆ ಪೋಷಕರ ಜೇಬಿಗೆ ಕತ್ತರಿ...

ಎಂಜಿನಿಯರಿಂಗ್ ಆಕಾಂಕ್ಷಿಗಳಿಗೆ ಬಿಗ್ ಶಾಕ್: ಸತತ 2ನೇ ವರ್ಷವೂ ಶುಲ್ಕ ಏರಿಕೆ ಪೋಷಕರ ಜೇಬಿಗೆ ಕತ್ತರಿ ಬೀಳೋದು ಫಿಕ್ಸ್

ಬೆಂಗಳೂರು: ರಾಜ್ಯದಲ್ಲಿ ತಾಂತ್ರಿಕ ಶಿಕ್ಷಣದ ಕನಸು ಕಾಣುತ್ತಿರುವ ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗೆ ಸರ್ಕಾರ ಬೆಲೆ ಏರಿಕೆಯ ಬಿಸಿ ಮುಟ್ಟಿಸಿದೆ. 2026-27ನೇ ಸಾಲಿನ ಎಂಜಿನಿಯರಿಂಗ್ ಕೋರ್ಸ್‌ಗಳ ಶುಲ್ಕವನ್ನು ಶೇಕಡಾ 7.5 ರಷ್ಟು ಹೆಚ್ಚಿಸಲು ಅಧಿಕೃತವಾಗಿ ತೀರ್ಮಾನಿಸಲಾಗಿದೆ.

ಶುಲ್ಕ ಏರಿಕೆಗೆ ಕಾರಣವೇನು?

ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ನೇತೃತ್ವದಲ್ಲಿ ನಡೆದ ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಖಾಸಗಿ ಕಾಲೇಜುಗಳು ಶೇ. 10 ರಿಂದ 15 ರಷ್ಟು ಏರಿಕೆಗೆ ಪಟ್ಟು ಹಿಡಿದಿದ್ದವು. ಉಪನ್ಯಾಸಕರ ವೇತನ ಪರಿಷ್ಕರಣೆ ಮತ್ತು ಕಾಲೇಜು ನಿರ್ವಹಣಾ ವೆಚ್ಚ ಏರಿಕೆಯ ನೆಪ ನೀಡಿ ಆಡಳಿತ ಮಂಡಳಿಗಳು ಒತ್ತಡ ಹೇರಿದ್ದವು. ಅಂತಿಮವಾಗಿ ಸರ್ಕಾರ ಶೇ. 7.5 ರಷ್ಟು ಹೆಚ್ಚಳಕ್ಕೆ ಸಮ್ಮತಿ ಸೂಚಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೊಸ ಶುಲ್ಕದ ಪಟ್ಟಿ ಹೀಗಿದೆ (CET ಕೋಟಾ):ಕಾಲೇಜು ವಿಧ

ಹಳೆಯ ಶುಲ್ಕ (ರೂ.) ಹೊಸ ಶುಲ್ಕ (ರೂ.)

ಟೈಪ್-1 ಕಾಲೇಜುಗಳು 81,800 87,935

ಟೈಪ್-2 ಕಾಲೇಜುಗಳು91,000 97,825

ಸತತ ಎರಡನೇ ವರ್ಷದ ಬರೆ

ಕಳೆದ 2025-26ನೇ ಸಾಲಿನಲ್ಲಿಯೂ ಶೇ. 7.5 ರಷ್ಟು ಶುಲ್ಕ ಹೆಚ್ಚಿಸಲಾಗಿತ್ತು. ಇದೀಗ ಸತತ ಎರಡನೇ ವರ್ಷವೂ ದರ ಏರಿಕೆಯಾಗಿರುವುದು ಮಧ್ಯಮ ವರ್ಗದ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. “ದಿನಬಳಕೆ ವಸ್ತುಗಳ ಬೆಲೆ ಏರಿಕೆಯ ನಡುವೆ ಈಗ ಶಿಕ್ಷಣವೂ ದುಬಾರಿಯಾದರೆ ಬಡ ವಿದ್ಯಾರ್ಥಿಗಳು ಎಲ್ಲಿಗೆ ಹೋಗಬೇಕು?” ಎಂಬ ಪ್ರಶ್ನೆ ಪೋಷಕ ವಲಯದಿಂದ ಕೇಳಿಬರುತ್ತಿದೆ.

ಸದ್ಯಕ್ಕೆ ಈ ದರ ಏರಿಕೆ ಖಾಸಗಿ ಕಾಲೇಜುಗಳಲ್ಲಿನ ಸರ್ಕಾರಿ ಸೀಟುಗಳಿಗೆ (CET) ಮಾತ್ರ ಅನ್ವಯಿಸಲಿದೆ. ಸರ್ಕಾರಿ ಕಾಲೇಜುಗಳ ಶುಲ್ಕದ ಬಗ್ಗೆ ಸರ್ಕಾರ ಇನ್ನೂ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular