HomeLatest NewsSHOCKING : 6 ವಿಷಯದಲ್ಲಿ ಬ್ಯಾಕ್ ಲಾಗ್ : ಕೊಡಗಿನಲ್ಲಿ ಡೆತ್ ನೋಟ್ ಬರೆದಿಟ್ಟು ಇಂಜಿನಿಯರಿಂಗ್...

SHOCKING : 6 ವಿಷಯದಲ್ಲಿ ಬ್ಯಾಕ್ ಲಾಗ್ : ಕೊಡಗಿನಲ್ಲಿ ಡೆತ್ ನೋಟ್ ಬರೆದಿಟ್ಟು ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ.!

ಕೊಡಗು : ಡೆತ್ ನೋಟ್ ಬರೆದಿಟ್ಟು ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ಹಳ್ಳಿಗಟ್ಟು ಎಂಬಲ್ಲಿ ನಡೆದಿದೆ.

ಸಿಐಟಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಇ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ತೇಜಸ್ವಿನಿ (19) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹಾಸ್ಟೆಲ್ ನಲ್ಲಿ ತಂಗಿದ್ದ ವಿದ್ಯಾರ್ಥಿನಿ ಸೂಸೈಡ್ ಮಾಡಿಕೊಂಡಿದ್ದು, ಡೆತ್ ನೋಟ್ ಪತ್ತೆಯಾಗಿದೆ. 6 ವಿಷಯ ಬ್ಯಾಕ್ ಲಾಗ್ ಇರುವ ಕಾರಣ ಸೂಸೈಡ್ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್ ಬರೆದಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಯಚೂರು ಮೂಲದ ವಿದ್ಯಾರ್ಥಿನಿ ತೇಜಸ್ವಿನಿಗೆ ಓದಲು ಆಸಕ್ತಿ ಇರಲಿಲ್ಲ, ಅಲ್ಲದೇ 6 ಬ್ಯಾಕ್ ಲಾಗ್ ಉಳಿದಿತ್ತು ಎನ್ನಲಾಗಿದೆ. ಈ ಹಿನ್ನೆಲೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular