ಬೆಂಗಳೂರು : 16 ನೇ ಮಹಡಿಯಿಂದ ಜಿಗಿದು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಬಾಗಲಗುಂಟೆಯ ಪ್ರಿನ್ಸ್ ಅಪಾರ್ಟ್ ಮೆಂಟ್ ಒಂದರಲ್ಲಿ ನಡೆದಿದೆ.
ಮಂಗಳೂರು ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ನಿಕ್ಷೇಪ್ ಬಂಗೇರಾ (26) ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ನಿಕ್ಷೇಪ್ ಬಂಗೇರಾ ತನ್ನ ತಂದೆ ತಾಯಿ ಜೊತೆ ಬೆಂಗಳೂರಿನ ಬಾಗಲಗುಂಟೆಯ ಪ್ರಿನ್ಸ್ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದನು. ವಿದೇಶದಲ್ಲಿ ಇಂಜಿನಿಯರಿಂಗ್ ಮುಗಿಸಿ ವಾಪಸ್ ಆಗಿದ್ದ ನಿಕ್ಷೇಪ್ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅನಾರೋಗ್ಯದಿಂದ ನಿಕ್ಷೇಪ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

