HomeKarnatakaBIG NEWS: ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ಹೋಟೆಲ್ ಸಿಬ್ಬಂದಿಯಿಂದ ಲೈಂಗಿಕ ದೌರ್ಜನ್ಯ

BIG NEWS: ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ಹೋಟೆಲ್ ಸಿಬ್ಬಂದಿಯಿಂದ ಲೈಂಗಿಕ ದೌರ್ಜನ್ಯ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಮೆಟ್ರೋದಲ್ಲಿ ಯುವತಿಗೆ ಕಾಮುಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆನ್ನಲ್ಲೇ ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ಹೋಟೆಲ್ ಸಿಬ್ಬಂದಿಯೊಬ್ಬ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ನಡೆದಿದೆ.

ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟರಸ್ತೆಯ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿಗೆ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕ ದೌರ್ಜನ್ಯವೆಸಗಿದ್ದಾನೆ ಎಂದು ಆರೋಪಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೋಟೆಲ್ ಗೆ ಬಿಲ್ ಕೊಡಲು ಹೋದಾಗ ಹೋಟೆಲ್ ನಲ್ಲಿದ್ದ ಯುವಕ ಬಾಗಿಲು ಮುಚ್ಚಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದು, ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಆರೋಪಿ ಕಬೀರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular