ಬೆಂಗಳೂರು: ಬೇಡಿಕೆ ಹೆಚ್ಚಿದ ಹಿನ್ನೆಲೆ ರಾಜ್ಯದ ಇನ್ನೂ 208 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ತರಗತಿ ಆರಂಭಿಸಲಾಗುವುದು.
ರಾಜ್ಯದಲ್ಲಿ ಆಂಗ್ಲ ಮಾಧ್ಯಮ ಬೋಧನೆಗೆ ಬೇಡಿಕೆ ಬಂದಿರುವ ವಿವಿಧ ಜಿಲ್ಲೆಗಳ 208 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2025- 26 ನೇ ಸಾಲಿನಿಂದ ಕನ್ನಡ ಮಾಧ್ಯಮದ ಜೊತೆಗೆ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ಆರಂಭಿಸಲು ಸರ್ಕಾರ ಮಂಗಳವಾರ ಅನುಮತಿ ನೀಡಿದೆ.
ರಾಜ್ಯದಲ್ಲಿ ಈಗಾಗಲೇ 2019ರಲ್ಲಿ 1000 ಸರ್ಕಾರಿ ಶಾಲೆಗಳು, 2024ರಲ್ಲಿ 1792 ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ(ಕನ್ನಡ ಮತ್ತು ಇಂಗ್ಲಿಷ್ ತರಗತಿ) ನಡೆಸಲು ಷರತ್ತುಬದ್ಧ ಅನುಮೋದನೆ ನೀಡಲಾಗಿತ್ತು. ಇವುಗಳಲ್ಲಿ ಎಲ್ಲಾ ಶಾಲೆಗಳಲ್ಲಿಯೂ ಆಂಗ್ಲ ಮಾಧ್ಯಮಕ್ಕೆ ಹೆಚ್ಚಿನ ಬೇಡಿಕೆ ಇದೆ. ವಿದ್ಯಾರ್ಥಿಗಳ ದಾಖಲಾತಿ ಕೂಡ ಹೆಚ್ಚಾಗಿದೆ. 2025- 26 ನೇ ಸಾಲಿನಿಂದ ಇನ್ನೂ 208 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮಕ್ಕೆ ಒಪ್ಪಿಗೆ ನೀಡಲಾಗಿದೆ.