HomeLive Newsಬೇಡಿಕೆ ಹೆಚ್ಚಿದ ಹಿನ್ನೆಲೆ ರಾಜ್ಯದ ಇನ್ನೂ 208 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ತರಗತಿ ಆರಂಭ

ಬೇಡಿಕೆ ಹೆಚ್ಚಿದ ಹಿನ್ನೆಲೆ ರಾಜ್ಯದ ಇನ್ನೂ 208 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ತರಗತಿ ಆರಂಭ

ಬೆಂಗಳೂರು: ಬೇಡಿಕೆ ಹೆಚ್ಚಿದ ಹಿನ್ನೆಲೆ ರಾಜ್ಯದ ಇನ್ನೂ 208 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ತರಗತಿ ಆರಂಭಿಸಲಾಗುವುದು.

 ರಾಜ್ಯದಲ್ಲಿ ಆಂಗ್ಲ ಮಾಧ್ಯಮ ಬೋಧನೆಗೆ ಬೇಡಿಕೆ ಬಂದಿರುವ ವಿವಿಧ ಜಿಲ್ಲೆಗಳ 208 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2025- 26 ನೇ ಸಾಲಿನಿಂದ ಕನ್ನಡ ಮಾಧ್ಯಮದ ಜೊತೆಗೆ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ಆರಂಭಿಸಲು ಸರ್ಕಾರ ಮಂಗಳವಾರ ಅನುಮತಿ ನೀಡಿದೆ.

ರಾಜ್ಯದಲ್ಲಿ ಈಗಾಗಲೇ 2019ರಲ್ಲಿ 1000 ಸರ್ಕಾರಿ ಶಾಲೆಗಳು, 2024ರಲ್ಲಿ 1792 ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ(ಕನ್ನಡ ಮತ್ತು ಇಂಗ್ಲಿಷ್ ತರಗತಿ) ನಡೆಸಲು ಷರತ್ತುಬದ್ಧ ಅನುಮೋದನೆ ನೀಡಲಾಗಿತ್ತು. ಇವುಗಳಲ್ಲಿ ಎಲ್ಲಾ ಶಾಲೆಗಳಲ್ಲಿಯೂ ಆಂಗ್ಲ ಮಾಧ್ಯಮಕ್ಕೆ ಹೆಚ್ಚಿನ ಬೇಡಿಕೆ ಇದೆ. ವಿದ್ಯಾರ್ಥಿಗಳ ದಾಖಲಾತಿ ಕೂಡ ಹೆಚ್ಚಾಗಿದೆ. 2025- 26 ನೇ ಸಾಲಿನಿಂದ ಇನ್ನೂ 208 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮಕ್ಕೆ ಒಪ್ಪಿಗೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular