ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭಿಸಲು ಮಹತ್ವದ ಕ್ರಮ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ದ್ವಿಭಾಷಾ ಮಾಧ್ಯಮ ಆರಂಭಿಸಲು ಮುಂದಾಗಿರುವ ಸರ್ಕಾರ ಸಿದ್ಧತೆ ಕೈಗೊಂಡಿದೆ.

ದ್ವಿಭಾಷಾ ಮಾಧ್ಯಮದಿಂದ ಹೆಚ್ಚಾಗಬಹುದಾದ ಮಕ್ಕಳ ದಾಖಲಾತಿ ಪ್ರಮಾಣ, ಅಗತ್ಯಕ್ಕೆ ಅನುಗುಣವಾಗಿ ಮೂಲಸೌಕರ್ಯ, ತರಗತಿ ಕೊಠಡಿ, ಬೋಧಕ ವರ್ಗ ಲಭ್ಯತೆಯ ಬಗ್ಗೆ ಜಿಲ್ಲಾವಾರು ವರದಿ ಕೇಳಲಾಗಿದೆ. ಪೋಷಕರ ವಲಯದಿಂದ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಲು ಭಾರಿ ಬೇಡಿಕೆ ಬಂದಿದೆ.

ಮೊದಲ ಹಂತದಲ್ಲಿ ಎರಡು ಸಾವಿರ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಆರಂಭಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಎಲ್ಲ ಜಿಲ್ಲೆಗಳ ಉಪನಿರ್ದೇಶಕರು ಆದ್ಯತೆವಾರು ಶಾಲೆಗಳ ಪಟ್ಟಿಯೊಂದಿಗೆ ವರದಿಯನ್ನು ಪ್ರಾದೇಶಿಕ ಆಯುಕ್ತರಿಗೆ ಸಲ್ಲಿಸಲು ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ. ವರದಿ ಪರಿಶೀಲಿಸಿ ಶಿಫಾರಸು ಸಲ್ಲಿಸಬೇಕು. ಬಳಿಕ ಇಲಾಖೆ ಸಮಗ್ರ ಪರಿಶೀಲನೆ ನಡೆಸಿ ಸರ್ಕಾರಕ್ಕೆ ಕೋರಿಕೆ ಸಲ್ಲಿಸಲಿದೆ.

ಈಗಾಗಲೇ ಇಂಗ್ಲೀಷ್ ಮಾಧ್ಯಮದಲ್ಲಿಯೂ ಬೋಧನೆ ನಡೆಸುತ್ತಿರುವ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್ಕೆಜಿ, ಒಂದನೇ ತರಗತಿಗಳಿಗೆ ಮಕ್ಕಳ ದಾಖಲಾತಿ ಸಂಖ್ಯೆ ಹೆಚ್ಚಾಗುತ್ತಿದೆ. ಕೆಪಿಎಸ್ ಶಾಲೆಗಳಲ್ಲಿ ಹೆಚ್ಚುವರಿ ವಿಭಾಗ ಆರಂಭಿಸಲು ಮತ್ತು ಕಿರಿಯ ಪ್ರಾಥಮಿಕ, ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 6, 7, 8, 9, 10ನೇ ತರಗತಿ ಆರಂಭಿಸಿ ಉನ್ನತೀಕರಿಸಲು ಸರ್ಕಾರ ಚಿಂತನೆ ನಡೆಸಿದ್ದು, ಇದಕ್ಕೆ ಅನುಗುಣವಾಗಿ ಮೂಲಸೌಕರ್ಯ, ತರಗತಿ ಕೊಠಡಿ, ಶಿಕ್ಷಕರ ಲಭ್ಯತೆಯ ಬಗ್ಗೆ ವರದಿ ಸಲ್ಲಿಸಲು ತಿಳಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read