alex Certify
ಕನ್ನಡ ದುನಿಯಾ       Mobile App
       

Kannada Duniya

ಡ್ರಗ್ಸ್ ಪ್ರಕರಣ; ನಟಿ ರಾಗಿಣಿಗೆ ಮತ್ತೆ ಶಾಕ್

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಅವರ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆಯಾಗಿದೆ.

ಡ್ರಗ್ಸ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ ಜಾಮೀನಿಗಾಗಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ಇಂದು ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್ ರಾಗಿಣಿ ಜಾಮೀನು ಅರ್ಜಿಯನ್ನು ಅಕ್ಟೋಬರ್ 23ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

ರಾಗಿಣಿ ಪರ ವಕೀಲ ಎ.‌ ಮೊಹಮ್ಮದ್ ತಾಹೀರ್ ವಾದ ಮಂಡಿಸಿದ್ದು, ರಾಗಿಣಿಗೆ ಜಾಮೀನು ನೀಡುವಂತೆ ಮನವಿ ಮಾಡಿದ್ದಾರೆ. ಆದರೆ ನ್ಯಾಯಾಲಯ ಮತ್ತೆ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿದೆ ಎಂದು ತಿಳಿದುಬಂದಿದೆ. ಜೈಲಿನಿಂದ ಇಂದಾದರೂ ಬಿಡುಗಡೆಯಾಗುವ ನಿರೀಕ್ಷೆಯಲ್ಲಿದ್ದ ನಟಿಗೆ ಮತ್ತೆ ಶಾಕ್ ಆಗಿದೆ.

Subscribe Newsletter

Get latest updates on your inbox...

Opinion Poll

  • ಕರೋನಾ ಸೋಂಕು ನಿಯಂತ್ರಣಕ್ಕೆ ಮೋದಿ ಸರ್ಕಾರ ಕೈಗೊಂಡಿರುವ ಕ್ರಮಗಳು ತೃಪ್ತಿದಾಯಕವಾಗಿದೆಯೇ...?

    View Results

    Loading ... Loading ...