alex Certify ʼಟಗರುʼ ವೀಕ್ಷಿಸಲು ಸಜ್ಜಾಗಿದ್ದಾರೆ ದುನಿಯಾ ವಿಜಯ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಟಗರುʼ ವೀಕ್ಷಿಸಲು ಸಜ್ಜಾಗಿದ್ದಾರೆ ದುನಿಯಾ ವಿಜಯ್

ಈಗಾಗಲೇ ಸಾಕಷ್ಟು ಸಿನಿಮಾಗಳನ್ನು ರೀ ರಿಲೀಸ್ ಮಾಡುತ್ತಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಸೂಪರ್ ಹಿಟ್ ‘ಟಗರು’ ಸಿನಿಮಾ ಕೂಡ ಅಕ್ಟೋಬರ್‌ 23 ರಂದು ಮರುಬಿಡುಗಡೆಯಾಗಿದೆ.

ನಟ ದುನಿಯಾ ವಿಜಯ್ ‘ಟಗರು’ ಸಿನಿಮಾವನ್ನು ಅಕ್ಟೋಬರ್‌ 25 ರಂದು ಥಿಯೇಟರ್‌ ನಲ್ಲಿ ವೀಕ್ಷಿಸುತ್ತಿದ್ದಾ.ರೆ ಈ ಕುರಿತು ತಮ್ಮ ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.

ಕಳೆದ ಆರೇಳು ತಿಂಗಳಿಂದ ಕೊರೊನಾ, ಐಸೋಲೇಶನ್, ಕ್ವಾರಂಟೈನ್, ಸೀಲ್ ಡಾನ್ ಇದೇ ರೀತಿಯ ಪದಗಳನ್ನು ಕೇಳುತ್ತಿದ್ದ ನಮಗೆ ಈಗ ಮಾರ್ನಿಂಗ್ ಶೋ, ಮ್ಯಾಟ್ನಿ, ಲೇಟ್ ನೈಟ್ ಶೋ ಎಂಬ ಪದಗಳನ್ನು ಕೇಳುವ ಸಮಯ ಬಂದಿದೆ. ಕೊರೊನಾಗೆ ವ್ಯಾಕ್ಸಿನ್ ಇನ್ನೂ ಬಂದಿಲ್ಲ, ಆದರೆ ಜೀವನವು ನಡೆಯಬೇಕಿರುವುದರಿಂದ ಎಲ್ಲ ಉದ್ಯಮಗಳಂತೆ, ಕಳೆದೊಂದು ವಾರದಿಂದ ಸರ್ಕಾರದ ನಿಯಮಗಳನ್ನು ಪಾಲಿಸುತ್ತಲೇ ನಮ್ಮ ಕನಸಿನ ಮನೆಗಳಾದ ಚಿತ್ರಮಂದಿರಗಳು ಪ್ರದರ್ಶನ ಆರಂಭಿಸಿವೆ.

ಭಯ ಆತಂಕ ಎಲ್ಲದರ ನಡುವೆಯೂ ಒಂದಷ್ಟು ಸಿನಿಮಾ ಪ್ರೇಮಿಗಳು ಥಿಯೇಟರ್ ಗೆ ಬಂದು ಸಿನಿಮಾ ನೋಡಿದ್ದಾರೆ. ಅವರೆಲ್ಲರಿಗೂ ನನ್ನ ಮನಃಪೂರ್ವಕ ವಂದನೆಗಳು. ನನ್ನ ‘ಸಲಗ’ ಸಿನಿಮಾದ ನಿರ್ಮಾಪಕರಾದ ಕೆ.ಪಿ. ಶ್ರೀಕಾಂತ್ ನಿರ್ಮಾಣದ ಗೆಳೆಯ ಸೂರಿ ನಿರ್ದೇಶನದ ಚಿತ್ರರಂಗದ ನಾಯಕ, ನನ್ನ ಪಾಲಿಗೆ ಅಣ್ಣನ ಸಮಾನರಾದ ಶಿವರಾಜ್ ಕುಮಾರ್, ಗೆಳೆಯ ಡಾಲಿ ಧನಂಜಯ ನಟನೆಯ ಬ್ಲಾಕ್ ಬಸ್ಟರ್ ‘ಟಗರು’ಇಂದು ಮರುಬಿಡುಗಡೆಯಾಗುತ್ತಿದೆ.

ಚಿತ್ರ ಮತ್ತೊಮ್ಮೆ ಗಲ್ಲಾಪೆಟ್ಟಿಗೆಯನ್ನು ದೋಚಲಿ ಎಂದು ಹಾರೈಸುತ್ತಾ ಭಾನುವಾರ ಅಂದರೆ ಅ.25 ರ ಮದ್ಯಾಹ್ನ 1.15ರ ಪ್ರದರ್ಶನಕ್ಕೆ ಅಭಿಮಾನಿಗಳ ಜತೆ ಸಿನಿಮಾ ನೋಡಲು ಮೈಸೂರು ರಸ್ತೆಯಲ್ಲಿರುವ ಸಿರ್ಸಿ ಸರ್ಕಲ್ ಬಳಿಯ ಗೋಪಾಲನ್ ಸಿನಿಮಾಸ್ ಗೆ ಬರುತ್ತಿದ್ದೇನೆ. ಸಾಮಾಜಿಕ ಅಂತರ ಕಾಯ್ದುಕೊಂಡು ನಮ್ಮ ಎಚ್ಚರಿಕೆಯಲ್ಲಿ ನಾವು ಇದ್ದುಕೊಂಡು ಸಿನಿಮಾ ನೋಡಲು ಆರಂಭಿಸೋಣ. ಚಿತ್ರಮಂದಿರದಲ್ಲಿ ಸಿನಿಮಾ ನೋಡುವ ಖುಷಿ ಮತ್ತು ಸಂತೋಷವನ್ನು ಅನುಭವಿಸೋಣ ಇಂತಿ ನಿಮ್ಮವ ದುನಿಯಾ ವಿಜಯ್ ಎಂದು ಬರೆದುಕೊಂಡಿದ್ದಾರೆ.

https://www.instagram.com/p/CGr3lotgb6T/?utm_source=ig_web_copy_link

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...