alex Certify ಅಪ್ಪನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದ ಅಭಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪ್ಪನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದ ಅಭಿ

 

ಬೆಂಗಳೂರು: ಇಂದು ಸ್ಯಾಂಡಲ್ ವುಡ್ ನ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಷ್ ಗೆ ಹುಟ್ಟುಹಬ್ಬದ ಸಂಭ್ರಮ. ಅಪ್ಪ ಇಲ್ಲದೇ ಆಚರಿಸಿಕೊಳ್ಳುತ್ತಿರುವ ಮೊದಲ ಹುಟ್ಟುಹಬ್ಬ ಇದು. ಅಪ್ಪನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಆದರೆ ಅಭಿಮಾನಿಗಳ ಪ್ರೀತಿ, ಆದರ ನೋಡಿದರೆ ಖುಷಿಯಾಗುತ್ತದೆ ಎಂದು ಹೇಳಿದ್ದಾರೆ.

ಬೆಳಿಗ್ಗೆಯಿಂದ ರಾಜ್ಯದ ವಿವಿಧ ಭಾಗಗಳಿಂದ ಅಭಿಮಾನಿಗಳು ಬಂದು ಶುಭ ಕೋರುತ್ತಿದ್ದಾರೆ. ಪ್ರತಿ ಬಾರಿ ಅಪ್ಪನ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದೆ. ಅಪ್ಪ ಹೋದ ಮೇಲೆ ಕಳೆದ ಎರಡು ವರ್ಷಗಳಿಂದ ಹುಟ್ಟುಹಬ್ಬ ಆಚರಿಸಿಕೊಳ್ಳುವುದನ್ನೇ ನಿಲ್ಲಿಸಿದ್ದೆ. ಅವರೇ ಕೊಟ್ಟಿರುವ ಅಭಿಮಾನಿಗಳ ಈ ಪ್ರೀತಿ ನನ್ನ ನೋವು ದೂರ ಮಾಡುತ್ತಿದೆ ಎಂದಿದ್ದಾರೆ.

ಇದೇ ವೇಳೆ ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ವಿಚಾರವಾಗಿ ಪ್ರತಿಕ್ರಿಯಿಸಿದ ಅಭಿಷೇಕ್, ಯಾರೋ ಕೆಲವರು ಮಾಡಿದ ತಪ್ಪಿಗೆ ಇಡೀ ಇಂಡಸ್ಟ್ರಿ ಹೆಸರು ಹೇಳುವುದು ತಪ್ಪು. ಪ್ರಕರಣದ ತನಿಖೆ ನಡೆಯುತ್ತಿದೆ. ಯಾರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆಯಾಗುತ್ತೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...